ನವದೆಹಲಿ: ಕಾಂಗ್ರೆಸ್ ಪಕ್ಷವು ಪಂಜಾಬ್‌ನ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಮರಿಂದರ್ ಸಿಂಗ್ ಬ್ರಾರ್ ಅವರನ್ನು ಲುಧಿಯಾನ ಕ್ಷೇತ್ರದಿಂದ ಕಣಕ್ಕಿಳಿಸಿದೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಸುಖ್ವಿಂದರ್ ಸಿಂಗ್ ರಾಂಧವಾ ಅವರಿಗೆ ಗುರುದಾಸಪುರ ಕ್ಷೇತ್ರದ ಟಿಕೆಟ್ ನೀಡಿದೆ. ಮಾಜಿ ಸಂಸದ ವಿಜಯ್ ಇಂದರ್ ಸಿಂಗ್ ಅವರನ್ನು ಆನಂದಪುರ ಸಾಹಿಬ್ ಕ್ಷೇತ್ರದಿಂದ ಹಾಗೂ ಕುಲ್ಬೀರ್ ಸಿಂಗ್ ಝಿರಾ ಅವರನ್ನು ಖಡೂರ್ ಸಾಹಿಬ್ ಕ್ಷೇತ್ರದಿಂದ ಸ್ಪರ್ಧೆಗಿಳಿಸಿದೆ. ಇಲ್ಲಿನ ಹಾಲಿ ಸಂಸದ ಜಸ್ಬೀರ್ ಸಿಂಗ್ ಗಿಲ್ ಅವರಿಗೆ ಟಿಕೆಟ್ ಲಭಿಸಿಲ್ಲ.
ಆನಂದಪುರ ಸಾಹಿಬ್ ಕ್ಷೇತ್ರದ ಸಂಸದರಾಗಿದ್ದ ಮನೀಷ್ ತಿವಾರಿ ಅವರನ್ನು ಚಂಡೀಗಢದಲ್ಲಿ ಸ್ಪರ್ಧೆಗಿಳಿಸಿದೆ. ಲುಧಿಯಾನ ಸಂಸದ ರವನೀತ್ ಸಿಂಗ್ ಬಿಟ್ಟೂ ಅವರು ಬಿಜೆಪಿ ಸೇರಿದ್ದಾರೆ.
ಇದರೊಂದಿಗೆ ಕಾಂಗ್ರೆಸ್ ಪಕ್ಷವು ಪಂಜಾಬ್‌ನ 13 ಕ್ಷೇತ್ರಗಳಲ್ಲಿ 12ಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ. ಫಿರೋಜ್‌ಪುರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಯನ್ನು ಪ್ರಕಟಿಸಿಲ್ಲ. ಪಂಜಾಬ್‌ನಲ್ಲಿ ಕೊನೆಯ ಹಂತದಲ್ಲಿ ಜೂನ್ 1 ರಂದು ಮತದಾನ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.