ADVERTISEMENT

ಕಾಂಗ್ರೆಸ್‌ ಪಕ್ಷದವರೇ ರಾಹುಲ್‌ ಗಾಂಧಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ:ಯಾದವ್

ಪಿಟಿಐ
Published 3 ಏಪ್ರಿಲ್ 2024, 9:53 IST
Last Updated 3 ಏಪ್ರಿಲ್ 2024, 9:53 IST
<div class="paragraphs"><p>ರಾಹುಲ್‌ ಗಾಂಧಿ</p></div>

ರಾಹುಲ್‌ ಗಾಂಧಿ

   

ಪಿಟಿಐ ಚಿತ್ರ

ಜಬಲ್ಪುರ (ಮಧ್ಯಪ್ರದೇಶ): ಕಾಂಗ್ರೆಸ್‌ ಪಕ್ಷವೂ ರಾಹುಲ್‌ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್‌ ಯಾದವ್‌ ವ್ಯಂಗ್ಯವಾಡಿದ್ದಾರೆ.

ADVERTISEMENT

ಲೋಕಸಭಾ ಚುನಾವಣೆಯಲ್ಲಿ ಮ್ಯಾಚ್‌ ಫಿಕ್ಸಿಂಗ್‌ ಮೂಲಕ ಗೆಲುವು ಸಾಧಿಸಿದರೆ, ದೇಶದಲ್ಲಿ ಶಾಂತಿ ನೆಲೆಸುವುದಿಲ್ಲ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಮಾತಿನಲ್ಲಿ ಯಾವುದೇ ಸತ್ಯವಿಲ್ಲ ಎಂದು ತಿರುಗೇಟು ನೀಡಿದರು.

ರಾಹುಲ್‌ ಗಾಂಧಿ ಹೇಳಿಕೆಯಲ್ಲಿ ಯಾವುದೇ ಗಂಭೀರತೆ ಇಲ್ಲ, ಏಕೆಂದರೆ ಅವರದೇ ಪಕ್ಷದವರು ರಾಹುಲ್‌ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಬೇರೆಯವರು ಹೇಗೆ ಅವರನ್ನು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಹೇಳಿದ್ದಾರೆ.

ಚುನಾವಣಾ ಪ್ರಕ್ರಿಯೆ ಗರಿಗೆದರಿದಂತೆ ಕಾಂಗ್ರೆಸ್‌ ಪಕ್ಷದ ಸುಳಿವೇ ಇಲ್ಲ. ಈ ಬೆಳವಣಿಗೆಗೆ ರಾಹುಲ್‌ ಅವರೇ ಕಾರಣ. ಕಾಂಗ್ರೆಸ್‌ ಪಕ್ಷವನ್ನಾಗಲಿ ಅಥವಾ ಚುನಾವಣೆಯನ್ನಾಗಲಿ ರಾಹುಲ್‌ ಗಂಭೀರವಾಗಿ ತೆಗೆದುಕೊಂಡಿಲ್ಲ. ಕಾಂಗ್ರೆಸ್‌ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳುವುದು ಒಳಿತು ಎಂದರು.

ಜೆ.ಪಿ ನಡ್ಡಾ ಅವರೊಂದಿಗೆ ಜಬಲ್ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯಾದವ್‌, ಇಂದೋರ್‌ ಹಾಗೂ ಉಜ್ಜಯಿನಿಯಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.