ADVERTISEMENT

LS Polls: 3ನೇ ಹಂತದ ಮತದಾನ: ಏ.12ರಿಂದ ನಾಮಪತ್ರ ಸಲ್ಲಿಕೆ ಆರಂಭ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಏಪ್ರಿಲ್ 2024, 5:55 IST
Last Updated 11 ಏಪ್ರಿಲ್ 2024, 5:55 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಕರ್ನಾಟಕ ಸೇರಿದಂತೆ 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 94 ಲೋಕಸಭಾ ಕ್ಷೇತ್ರಗಳಿಗಾಗಿ ಮೇ 7ರಂದು ನಡೆಯಲಿರುವ ಮೂರನೇ ಹಂತದ ಚುನಾವಣೆಗೆ ಏಪ್ರಿಲ್ 12, ಶುಕ್ರವಾರದಂದು ಅಧಿಸೂಚನೆ ಹೊರಡಿಸುವುದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

3ನೇ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದೆ. ಏಪ್ರಿಲ್ 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ADVERTISEMENT

ಮೂರನೇ ಹಂತದಲ್ಲಿ ಕರ್ನಾಟಕ, ಅಸ್ಸಾಂ, ಬಿಹಾರ, ಚಂಡೀಗಢ, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯು, ಗೋವಾ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ತಲಾ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಏಪ್ರಿಲ್ 26ರಂದು ಮೊದಲನೇ ಹಂತ ಮತ್ತು ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.