ADVERTISEMENT

ಪ್ರಜಾಪ್ರಭುತ್ವದ ರಕ್ಷಣೆಗಾಗಿ 'ಇಂಡಿಯಾ' ಮೈತ್ರಿಕೂಟದ ಹೋರಾಟ: ರಾಹುಲ್ ಗಾಂಧಿ

ಪಿಟಿಐ
Published 20 ಏಪ್ರಿಲ್ 2024, 9:50 IST
Last Updated 20 ಏಪ್ರಿಲ್ 2024, 9:50 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

(ಪಿಟಿಐ ಚಿತ್ರ)

ಭಾಗಲ್‌ಪುರ (ಬಿಹಾರ): ಕೇಂದ್ರದ ಬಿಜೆಪಿ ಸರ್ಕಾರವು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ADVERTISEMENT

ಆದರೆ ಪ್ರಜಾಪ್ರಭುತ್ವದ ರಕ್ಷಣೆಗಾಗಿ 'ಇಂಡಿಯಾ' ಮೈತ್ರಿಕೂಟ ಹೋರಾಡುತ್ತಿದ್ದು, ಬಿಜೆಪಿಯ ಎಲ್ಲ ಯತ್ನವನ್ನು ವಿಫಲಗೊಳಿಸಲಿದೆ ಎಂದು ಅವರು ಹೇಳಿದ್ದಾರೆ.

ಬಿಹಾರದ ಭಾಗಲ್‌ಪುರದಲ್ಲಿ ಇಂದು (ಶುಕ್ರವಾರ) ಚುನಾವಣಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, 'ಲೋಕಸಭೆ ಚುನಾವಣೆಯಲ್ಲಿ 370ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಾಗಿ ಬಿಜೆಪಿ ಹೇಳುತ್ತಿದೆ. ಆದರೆ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಾಗದು' ಎಂದು ಹೇಳಿದರು.

'ಬಿಜೆಪಿ-ಆರ್‌ಎಸ್‌ಎಸ್ ಸಂವಿಧಾನವನ್ನು ರದ್ದುಗೊಳಿಸಲು ಬಯಸುತ್ತಿದೆ. ದೇಶದ ಬಡವರು, ದಲಿತರು, ಬುಡಕಟ್ಟು ಜನಾಂಗದವರಿಗೆ ಏನೆಲ್ಲ ಸೌಲಭ್ಯಗಳು ದೊರಕಿದೆಯೇ ಅವೆಲ್ಲ ಸಂವಿಧಾನದಿಂದಾಗಿ ದೊರಕಿದೆ. ಒಂದು ವೇಳೆ ಸಂವಿಧಾನವನ್ನು ಬದಲಾಯಿಸಿದರೆ ಎಲ್ಲವೂ ಕೊನೆಗೊಳ್ಳಲಿದೆ' ಎಂದು ಕಳವಳ ವ್ಯಕ್ತಪಡಿಸಿದರು.

'ಮೋದಿ ಸರ್ಕಾರ ಶ್ರೀಮಂತರ ಪರವಾಗಿ ಇದೆ. ಶೇ 70ರಷ್ಟು ಜನಸಂಖ್ಯೆ ಹೊಂದಿರುವುದಕ್ಕೆ ಸಮಾನವಾದ ಸಂಪತ್ತು ಕೇವಲ 22 ಜನರಲ್ಲಿ ಇದೆ. ಇದನ್ನು ಬದಲಾಯಿಸಲು ನಾವು ಬಯಸುತ್ತೇವೆ' ಎಂದು ಅವರು ಹೇಳಿದರು.

ಅಧಿಕಾರಕ್ಕೆ ಬಂದರೆ 'ಅಗ್ನಿಪಥ' ಯೋಜನೆ ರದ್ದುಗೊಳಿಸುವುದಾಗಿ ರಾಹುಲ್ ಗಾಂಧಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.