ADVERTISEMENT

LSpolls: AIADMK ಪ್ರಣಾಳಿಕೆ ಬಿಡುಗಡೆ, ಮಹಿಳೆಯರಿಗೆ ಮಾಸಿಕ ₹3,000 ನೆರವು ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಮಾರ್ಚ್ 2024, 10:30 IST
Last Updated 22 ಮಾರ್ಚ್ 2024, 10:30 IST
<div class="paragraphs"><p>ಎಡಪ್ಪಾಡಿ ಕೆ. ಪಳನಿಸ್ವಾಮಿ</p></div>

ಎಡಪ್ಪಾಡಿ ಕೆ. ಪಳನಿಸ್ವಾಮಿ

   

ಚೆನ್ನೈ: ಲೋಕಸಭೆ ಚುನಾವಣೆಗೆ ತಮಿಳುನಾಡು ವಿಧಾನಸಭೆಯ ಪ್ರಮುಖ ವಿರೋಧ ಪಕ್ಷವಾದ ಇಂದು (ಶುಕ್ರವಾರ) ಪಕ್ಷದ ಪ್ರಣಾಳಿಕೆಯನ್ನು ಪ್ರಕಟಿಸಿದೆ.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಹಿಳೆಯರಿಗೆ ಮಾಸಿಕ ₹3,000 ಆರ್ಥಿಕ ನೆರವು ನೀಡುವುದಾಗಿ ಪಕ್ಷ ಘೋಷಿಸಿದೆ.

ADVERTISEMENT

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ರಾಜ್ಯಪಾಲರ ನೇಮಕ, ನೀಟ್‌ಗೆ ಪರ್ಯಾಯ ಪರೀಕ್ಷೆ, ಚೆನ್ನೈನಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆ ಸೇರಿದಂತೆ ಒಟ್ಟು 113 ಭರವಸೆಗಳನ್ನು ಎಐಎಡಿಎಂಕೆ ನೀಡಿದೆ.

ಎಐಎಡಿಎಂಕೆ ಕಳೆದ ವರ್ಷ ಬಿಜೆಪಿ ಜತೆಗೆ ಮೈತ್ರಿ ಮುರಿದುಕೊಂಡಿತ್ತು. ಹಾಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದೆ.

ತಮಿಳುನಾಡಿನ 16 ಲೋಕಸಭಾ ಕ್ಷೇತ್ರಗಳಿಗೆ ಎಐಎಡಿಎಂಕೆ ಗುರುವಾರ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದಕ್ಕೂ ಮುನ್ನ ಮಾರ್ಚ್‌ 20ರಂದು ಮೊದಲ ಪಟ್ಟಿಯಲ್ಲಿ 16 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು.

ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳಿಗೆ ಎಪ್ರಿಲ್ 19ರಂದು ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.