ADVERTISEMENT

LS Polls | ಪಶ್ಚಿಮ ಬಂಗಾಳದ ಎರಡು ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

ಪಿಟಿಐ
Published 3 ಜೂನ್ 2024, 5:30 IST
Last Updated 3 ಜೂನ್ 2024, 5:30 IST
<div class="paragraphs"><p>ಮತದಾರರು ಸರದಿ ಸಾಲಿನಲ್ಲಿ ನಿಂತಿರುವ ದೃಶ್ಯ</p></div>

ಮತದಾರರು ಸರದಿ ಸಾಲಿನಲ್ಲಿ ನಿಂತಿರುವ ದೃಶ್ಯ

   

–ಪಿಟಿಐ ಚಿತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಬರಾಸತ್ ಮತ್ತು ಮಥುರಾಪುರ ಲೋಕಸಭಾ ಕ್ಷೇತ್ರಗಳ ತಲಾ ಒಂದು ಮತಗಟ್ಟೆಯಲ್ಲಿ ಇಂದು (ಸೋಮವಾರ) ಮರು ಮತದಾನ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6ರವರೆಗೆ ನಡೆಯಲಿದೆ. ಬರಾಸತ್ ಲೋಕಸಭಾ ಕ್ಷೇತ್ರದ ದೇಗಂಗಾ ವಿಧಾನಸಭಾ ವ್ಯಾಪ್ತಿಯ ಕದಂಬಗಚಿ ಸರದಾರ್ ಹಾಗೂ ಮಥುರಾಪುರ ಲೋಕಸಭಾ ಕ್ಷೇತ್ರದ ಕಾಕದ್ವೀಪ್ ವಿಧಾನಸಭಾ ವ್ಯಾಪ್ತಿಯಲ್ಲಿ ಮತದಾನ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ

ಈ ಎರಡೂ ಕ್ಷೇತ್ರಗಳಲ್ಲಿ ಜೂನ್ 1ರಂದು ಮತದಾನ ನಡೆದಿತ್ತು. ಆದರೆ, ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ವೀಕ್ಷಕರ ವರದಿ ಆಧರಿಸಿ ಚುನಾವಣಾ ಆಯೋಗವು ಮರು ಮತದಾನ ನಡೆಸಲು ತೀರ್ಮಾನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಸಂದೇಶ್‌ಖಾಲಿ ಪ್ರದೇಶದ ಬಶೀರ್‌ಹಾಟ್‌ ಲೋಕಸಭಾ ಕ್ಷೇತ್ರದಲ್ಲಿ ಶನಿವಾರ ನಡೆದ ಮತದಾನದ ವೇಳೆ ಚುನಾವಣಾ ಅಕ್ರಮ ವಿಚಾರಕ್ಕೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವ್ಯಾಪಕ ಹಿಂಸಾಚಾರ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದರು.

ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್‌ ಸಿಡಿಸಿ, ಲಾಠಿ ಪ್ರಹಾರ ನಡೆಸಿದ್ದರು. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿವಿಧ ರಾಜಕೀಯ ಪಕ್ಷಗಳು 1,899 ದೂರುಗಳನ್ನು ನೀಡಿವೆ ಎಂದು ಚುನಾವಣಾ ಆಯೋಗ ತಿಳಿಸಿದ್ದು, ಪೋಲಿಂಗ್‌ ಏಜೆಂಟರನ್ನು ಮತಗಟ್ಟೆ ಪ್ರವೇಶಿಸದಂತೆ ತಡೆದಿರುವುದು ಹಿಂಸಾಚಾರಕ್ಕೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.