ಎಸ್‌ಪಿ ನಾಯಕ ಅಖಿಲೇಶ್ ಯಾದವ್
ಭೋಪಾಲ್: ಸಮಾಜವಾದಿ ಪಕ್ಷವು ಖಜುರಾಹೊ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದ್ದು, ಮಾಜಿ ಶಾಸಕಿ ಮೀರಾ ದೀಪ್ ನಾರಾಯಣ ಯಾದವ್ ಅವರಿಗೆ ಟಿಕೆಟ್ ನೀಡಿದೆ. ಪಕ್ಷವು ಈ ಮೊದಲು ಮನೋಜ್ ಯಾದವ್ ಅವರ ಹೆಸರನ್ನು ಪ್ರಕಟಿಸಿತ್ತು.
ಮೀರಾ ಅವರು ಮಧ್ಯ ಪ್ರದೇಶ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಹಾಲಿ ಸಂಸದರೂ ಆಗಿರುವ ವಿ.ಡಿ.ಶರ್ಮಾ ಅವರನ್ನು ಎದುರಿಸಲಿದ್ದಾರೆ. ಕಾಂಗ್ರೆಸ್ ಜತೆಗಿನ ಹೊಂದಾಣಿಕೆಯಂತೆ ಖಜುರಾಹೊ ಕ್ಷೇತ್ರ ಎಸ್‌ಪಿಗೆ ದೊರೆತಿದೆ. ಮೀರಾ ಅವರು ಇದೇ ಕ್ಷೇತ್ರದ ವ್ಯಾಪ್ತಿಗೆ ಬರುವ ನಿವಾರಿ ವಿಧಾನಸಭಾ ಕ್ಷೇತ್ರದಿಂದ 2008ರಲ್ಲಿ ಆಯ್ಕೆಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.