ADVERTISEMENT

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ: 43 ಕ್ಷೇತ್ರಗಳಲ್ಲಿ ‘INDIA’ ಮುನ್ನಡೆ

ಪಿಟಿಐ
Published 4 ಜೂನ್ 2024, 6:37 IST
Last Updated 4 ಜೂನ್ 2024, 6:37 IST
<div class="paragraphs"><p>ಎಸ್‌ಪಿ ನಾಯಕ ಅಖಿಲೇಶ್ ಯಾದವ್</p></div>

ಎಸ್‌ಪಿ ನಾಯಕ ಅಖಿಲೇಶ್ ಯಾದವ್

   

ಲಖನೌ(ಉತ್ತರ ಪ್ರದೇಶ): 80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶ ರಾಜ್ಯವು ಎನ್‌ಡಿಎ ಮತ್ತು ‘ಇಂಡಿಯಾ’ ಎರಡಕ್ಕೂ ಅತ್ಯಂತ ಪ್ರಮುಖವಾದದ್ದಾಗಿದೆ. 2019ರ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಈ ಬಾರಿ ಹಿನ್ನಡೆ ಅನುಭವಿಸಿದೆ.

ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಲ್ಲಿ ‘ಇಂಡಿಯಾ’ ಬಣ, 36 ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.

ADVERTISEMENT

ಇಲ್ಲಿನ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಎಸ್‌ಪಿ ನಡುವೆ ನಿಕಟ ಪೈಪೋಟಿ ಇದ್ದು, 8 ಕ್ಷೇತ್ರಗಳಲ್ಲಿ ರಾಕಾಂಗ್ರೆಸ್ ಮುನ್ನಡೆ ಪಡೆದಿದೆ.

ರಾಯ್‌ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮುನ್ನಡೆ ಕಾಯ್ದುಕೊಂಡಿದ್ದರೆ, ಅಮೇಠಿಯಲ್ಲಿ ಸ್ಮೃತಿ ಇರಾನಿ ಹಿನ್ನಡೆಯಲ್ಲಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಬಿಎಸ್‌ಪಿ 10, ಎಸ್‌ಪಿ 5 ಮತ್ತು ಅಪ್ನಾ ದಳ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.