ADVERTISEMENT

ಕರ್ನಾಟಕದಲ್ಲಿ ಮುಸ್ಲಿಮರನ್ನು ಅಕ್ರಮವಾಗಿ OBC ಪಟ್ಟಿಗೆ ಸೇರಿಸಿದ ಕಾಂಗ್ರೆಸ್:ಮೋದಿ

ಪಿಟಿಐ
Published 25 ಏಪ್ರಿಲ್ 2024, 7:29 IST
Last Updated 25 ಏಪ್ರಿಲ್ 2024, 7:29 IST
<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

(ಪಿಟಿಐ ಚಿತ್ರ)

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಆರೋಪಿಸಿದ್ದಾರೆ.

ADVERTISEMENT

ಮಧ್ಯಪ್ರದೇಶದಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪಿತ್ರಾರ್ಜಿತ ಆಸ್ತಿ ಮೇಲೆ ತೆರಿಗೆ ಹೇರಲು ಹೊರಟಿದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.

'ಮುಸ್ಲಿಂ ಎಂಬ ಕಾರಣಕ್ಕೆ ಮಾತ್ರ ಉಚಿತ ರೇಷನ್ ಪಡೆಯುತ್ತಾರೆ ಎಂಬುದನ್ನು ನೀವು ಎಂದಾದರೂ ಕೇಳಿದ್ದೀರಾ? ದೇಶದ ಸಂಪತ್ತಿನ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಕಾಂಗ್ರೆಸ್ ಹೇಳುತ್ತದೆ. ಆದರೆ ಬಡವರಿಗೆ ಮೊದಲ ಹಕ್ಕು ಎಂದು ನಾವು ಹೇಳುತ್ತೇವೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

'ಆದಿವಾಸಿಗಳು ಹಾಗೂ ಹಿಂದುಳಿದ ವರ್ಗದವರ ಹಕ್ಕುಗಳನ್ನು ಕಸಿದುಕೊಳ್ಳಲು ಕಾಂಗ್ರೆಸ್ ಹಲವು ವರ್ಷಗಳಿಂದ ಸಂಚು ರೂಪಿಸುತ್ತಿದೆ. ಹಿಂದುಳಿದ ವರ್ಗಗಳ ಹಕ್ಕುಗಳನ್ನು ಕಸಿದುಕೊಳ್ಳುವವರನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗುವುದು' ಎಂದು ಪ್ರಧಾನಿ ಮೋದಿ ಎಚ್ಚರಿಸಿದ್ದಾರೆ.

'ಬಿಜೆಪಿ ಪಾಲಿಗೆ ದೇಶಕ್ಕಿಂತ ಮಿಗಿಲಾಗಿ ಬೇರೊಂದಿಲ್ಲ. ಆದರೆ ಕಾಂಗ್ರೆಸ್‌ಗೆ ಕುಟುಂಬವೇ ಮುಖ್ಯವೆನಿಸಿದೆ' ಎಂದು ಅವರು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.