ADVERTISEMENT

LS Polls | 2ನೇ ಹಂತ: ಕರ್ನಾಟಕದ 14 ಸೇರಿದಂತೆ 88 ಕ್ಷೇತ್ರಗಳಲ್ಲಿ ಮತದಾನ ಆರಂಭ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಏಪ್ರಿಲ್ 2024, 3:11 IST
Last Updated 26 ಏಪ್ರಿಲ್ 2024, 3:11 IST
<div class="paragraphs"><p>ಮತದಾನ</p></div>

ಮತದಾನ

   

ಸಾಂದರ್ಭಿಕ ಚಿತ್ರ

ನವದೆಹಲಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 13 ರಾಜ್ಯಗಳ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ADVERTISEMENT

ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಮತದಾನ ಆರಂಭಗೊಂಡಿದೆ. ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಕರ್ನಾಟಕ, ಕೇರಳ, ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ, ಬಿಹಾರ, ಅಸ್ಸಾಂ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಮಣಿಪುರ, ತ್ರಿಪುರಾ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮತದಾನ ನಡೆಯುತ್ತಿದೆ.

ಮತದಾನ ಮಾಡಿದ ಪ್ರಮುಖರು:

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇರಳದ ವಿಪಕ್ಷ ನಾಯಕ ವಿ.ಡಿ.ಸತೀಶ್, ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹಲೋತ್, ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ, ನಟ ಪ್ರಕಾಶ್ ರಾಜ್, ಬಿಜೆಪಿಯ ಸುರೇಶ್ ಗೋಪಿ, ಅನಿಲ್ ಆ್ಯಂಟನಿ, ವಿ. ಮುರಳೀಧರನ್, ರಾಜೀವ್ ಚಂದ್ರಶೇಖರ್ ಮತ್ತು ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್.

ಎಲ್ಲಿಲ್ಲಿ ಇಂದು ಮತದಾನ?

ಕರ್ನಾಟಕ (14 ಕ್ಷೇತ್ರ)

ಕೇರಳ (ಎಲ್ಲ 20 ಕ್ಷೇತ್ರ)

ರಾಜಸ್ಥಾನ (13 ಕ್ಷೇತ್ರ)

ಮಹಾರಾಷ್ಟ್ರ, ಉತ್ತರ ಪ್ರದೇಶ (ತಲಾ 8 ಕ್ಷೇತ್ರ)

ಮಧ್ಯಪ್ರದೇಶ (7 ಕ್ಷೇತ್ರ)

ಬಿಹಾರ, ಅಸ್ಸಾಂ, (ತಲಾ 5 ಕ್ಷೇತ್ರ)

ಛತ್ತೀಸ್‌ಗಢ, ಪಶ್ಚಿಮ ಬಂಗಾಳ(3 ಕ್ಷೇತ್ರ)

ಮಣಿಪುರ, ತ್ರಿಪುರಾ, ಜಮ್ಮು ಮತ್ತು ಕಾಶ್ಮೀರ (ತಲಾ 1 ಕ್ಷೇತ್ರ)

ಕಣದಲ್ಲಿರುವ ಪ್ರಮುಖರು:

ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಶಶಿ ತರೂರ್‌, ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ನಟಿ ಹೇಮಾ ಮಾಲಿನಿ ಸೇರಿದಂತೆ ಪ್ರಮುಖರು ಕಣದಲ್ಲಿದ್ದಾರೆ.

ಏಳು ಹಂತಗಳ ಲೋಕಸಭೆ ಚುನಾವಣೆಯ ಫಲಿತಾಂಶ ಜೂನ್ 4ರಂದು ಪ್ರಕಟಗೊಳ್ಳಲಿದೆ. ಏಪ್ರಿಲ್‌ 19ರಂದು ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.