ADVERTISEMENT

ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದಿಲ್ಲ ಎಂದು ‘ಗ್ಯಾರಂಟಿ’ ನೀಡುತ್ತೇನೆ: ರಾಹುಲ್

ಪಿಟಿಐ
Published 28 ಮೇ 2024, 16:21 IST
Last Updated 28 ಮೇ 2024, 16:21 IST
ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ
ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ   

ವಾರಾಣಸಿ: ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗುವುದಿಲ್ಲ ಎಂದು ನಾನು ನಿಮಗೆ ‘ಗ್ಯಾರಂಟಿ’ ನೀಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಇಲ್ಲಿನ ಸ್ಪರ್ಧೆಯು ಪ್ರಧಾನಿ ಅಭ್ಯರ್ಥಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ನಡುವೆ ಅಲ್ಲ. ಏಕೆಂದರೆ ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ’ ಎಂದು ಭವಿಷ್ಯ ನುಡಿದಿದ್ದಾರೆ.

ಜೂನ್ 4ರ ಬಳಿಕ ಮೋದಿ ಅವರು ಈ ದೇಶದ ಪ್ರಧಾನಿಯಾಗಿರುವುದಿಲ್ಲ ಎಂದು ನಾನು ನಿಮಗೆ ‘ಗ್ಯಾರಂಟಿ’ಯೊಂದಿಗೆ ಹೇಳುತ್ತಿದ್ದೇನೆ ಎಂದು ರಾಹುಲ್ ತಿಳಿಸಿದ್ದಾರೆ.

ADVERTISEMENT

ಮೋದಿ ಮತ್ತು ಅಜಯ್ ರೈ ನಡುವೆ ಪೈಪೋಟಿ ಜೋರಾಗಿದ್ದು, ಈ ಸ್ಪರ್ಧೆಯಲ್ಲಿ ರೈ ಗೆಲ್ಲುವ ಸಾಧ್ಯತೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಏಳನೇ ಮತ್ತು ಕೊನೆಯ ಹಂತದ ಮತದಾನ ಜೂನ್‌ 1ರಂದು ನಡೆಯಲಿದೆ. ಅಂದೇ ವಾರಾಣಸಿಯಲ್ಲೂ ಮತದಾನ ನಡೆಯಲಿದ್ದು, ಜೂನ್‌ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.