ಪ್ರಮೋದ್ ಸಾವಂತ್
(ಪಿಟಿಐ ಚಿತ್ರ)
ಪಣಜಿ: ಗೋವಾದ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯ ಗಳಿಸಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯ ಅಭ್ಯರ್ಥಿಗಳಿಗೆ ಜನರಿಂದ ಅಭೂತಪೂರ್ವ ಬೆಂಬಲ ದೊರಕುತ್ತಿದ್ದು, ಉತ್ತರ ಗೋವಾದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತ್ತು ದಕ್ಷಿಣ ಗೋವಾದಲ್ಲಿ 60 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಸಾವಂತ್ ಹೇಳಿದ್ದಾರೆ.
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಕೆಲಸಗಳ ಬಗ್ಗೆ ಜನರಿಗೆ ಅಪಾರ ನಂಬಿಕೆಯಿದೆ. ಬಿಜೆಪಿ ಎರಡು ಸುತ್ತಿನ ಪ್ರಚಾರವನ್ನು ಈಗಾಗಲೇ ಪೂರ್ಣಗೊಳಿಸಿದೆ ಎಂದು ಅವರು ಹೇಳಿದ್ದಾರೆ.
ಬಿಜೆಪಿಯಿಂದ ಉತ್ತರ ಗೋವಾದಿಂದ ಶ್ರೀಪಾದ್ ನಾಯಕ್ ಮತ್ತು ದಕ್ಷಿಣ ಗೋವಾದಿಂದ ಪಲ್ಲವಿ ಡೆಂಪೊ ಕಣಕ್ಕಿಳಿದಿದ್ದಾರೆ.
ಕಾಂಗ್ರೆಸ್‌ನಿಂದ ಈ ಎರಡೂ ಕ್ಷೇತ್ರಗಳಲ್ಲಿ ಅನುಕ್ರಮವಾಗಿ ಮಾಜಿ ಕೇಂದ್ರ ಸಚಿವ ರಮಾಕಾಂತ್ ಖಲಾಪ್ ಮತ್ತು ವಿರಿಯಾಟೊ ಫೆರ್ನಾಂಡೀಸ್ ಸ್ಪರ್ಧಿಸುತ್ತಿದ್ದಾರೆ.
ಗೋವಾದಲ್ಲಿ ಲೋಕಸಭೆ ಚುನಾವಣೆ ಮೇ 7ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.