ADVERTISEMENT

LS Polls 2024 | ತೆಲಂಗಾಣ ಕಾಂಗ್ರೆಸ್‌ ಎಟಿಎಂ: ಅಮಿತ್ ಶಾ

ಪಿಟಿಐ
Published 25 ಏಪ್ರಿಲ್ 2024, 10:17 IST
Last Updated 25 ಏಪ್ರಿಲ್ 2024, 10:17 IST
<div class="paragraphs"><p>ಅಮಿತ್ ಶಾ</p></div>

ಅಮಿತ್ ಶಾ

   

– ಪಿಟಿಐ ಚಿತ್ರ

ಹೈದರಾಬಾದ್: ಇಲ್ಲಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ತೆಲಂಗಾಣ ರಾಜ್ಯವನ್ನು ಕಾಂಗ್ರೆಸ್‌ ‘ದೆಹಲಿಯ ಎಟಿಎಂ‘ ಮಾಡಿದೆ ಎಂದು ಗೃಹ ಸಚಿವ ಅಮಿತ್‌ ಶಾ ಆರೋಪಿಸಿದರು.

ADVERTISEMENT

ಮೆಡಕ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಘುನಾಥನ್ ರಾವ್ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಕಾಂಗ್ರೆಸ್‌ ತೆಲಂಗಾಣವನ್ನು ಎಟಿಎಂ ಮಾಡಿಕೊಂಡಿದೆ. ಬಿಆರ್‌ಎಸ್‌ನ ಕಾಲೇಶ್ವರಂ, ಭೂಹಗರಣಗಳು ಅಥವಾ ಇತರೆ ಯಾವುದೇ ಹಗರಣಗಳ ಬಗ್ಗೆ ಕಾಂಗ್ರೆಸ್‌ ತನಿಖೆ ಮಾಡುತ್ತಿಲ್ಲ. ಭ್ರಷ್ಟಾಚಾರಕ್ಕಾಗಿ ಕಾಂಗ್ರೆಸ್‌ ಮತ್ತು ಬಿಆರ್‌ಎಸ್‌ ಮೈತ್ರಿ ಮಾಡಿಕೊಂಡಿವೆ ಎಂದರು. 

ನೀವು ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಿ, ಅವರು ತೆಲಂಗಾಣವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುತ್ತಾರೆ ಎಂದು ಅವರು ಹೇಳಿದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಮಾತ್ರ ತೆಲಂಗಾಣದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಅಮಿತ್‌ ಶಾ ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.