ADVERTISEMENT

ಬಿಜೆಪಿ ಮಾಜಿ ಶಾಸಕ ರೋಹಿತ್‌ ರೆವ್ಡಿ ಕಾಂಗ್ರೆಸ್‌ಗೆ ಸೇರ್ಪಡೆ

ಪಿಟಿಐ
Published 14 ಮೇ 2024, 12:19 IST
Last Updated 14 ಮೇ 2024, 12:19 IST
<div class="paragraphs"><p>ಕಾಂಗ್ರೆಸ್</p></div>

ಕಾಂಗ್ರೆಸ್

   

ಚಂಡೀಗಢ: ಪಾಣಿಪತ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿಜೆಪಿಯ ರೋಹಿತ್‌ ರೆವ್ಡಿ ಅವರು ಮಂಗಳವಾರ ಕಾಂಗ್ರೆಸ್‌ ಸೇರ್ಪಡೆಯಾದರು.

ರೋಹ್ಟಕ್‌ನಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಭೂಪಿಂದರ್‌ ಸಿಂಗ್‌ ಹೂಡಾ ಅವರು ರೋಹಿತ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ADVERTISEMENT

ರೋಹಿತ್‌ ಅವರ ಸೇರ್ಪಡೆಯಿಂದ ಪಾಣಿಪತ್ ಪ್ರದೇಶದಲ್ಲಿ ಪಕ್ಷದ ಬಲ ಹೆಚ್ಚಿದೆ. ಯಾವುದೇ ಪೂರ್ವ ಷರತ್ತು ಇಲ್ಲದೆ ಪಕ್ಷಕ್ಕೆ ಸೇರಿರುವ ಅವರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಹೂಡಾ ತಿಳಿಸಿದರು.

ಹರಿಯಾಣದಲ್ಲಿ ಕಾಂಗ್ರೆಸ್‌ ಪರ ಅಲೆ ಇದ್ದು, ಎಲ್ಲ ಒಂಬತ್ತು ಸ್ಥಾನಗಳನ್ನೂ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.