ADVERTISEMENT

LS polls 2024: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ

ಪಿಟಿಐ
Published 19 ಏಪ್ರಿಲ್ 2024, 2:37 IST
Last Updated 19 ಏಪ್ರಿಲ್ 2024, 2:37 IST
<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

ನವದೆಹಲಿ: ದೇಶದ 102 ಕ್ಷೇತ್ರಗಳಲ್ಲಿ ಇಂದು ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಮನವಿ ಮಾಡಿದ್ದಾರೆ.

ವಿಶೇಷವಾಗಿ ಯುವಕರು ಹಾಗೂ ಪ್ರಥಮ ಬಾರಿಗೆ ಮತ ಚಲಾಯಿಸುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಕರೆ ನೀಡಿದ್ದಾರೆ.

ADVERTISEMENT

'ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬ ಇಂದಿನಿಂದ ಆರಂಭವಾಗಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಎಲ್ಲಾ ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ ದಾಖಲೆ ಸೃಷ್ಟಿಸುವಂತೆ ನಾನು ವಿನಂತಿಸುತ್ತೇನೆ' ಎಂದು ಪ್ರಧಾನಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

'ವಿಶೇಷವಾಗಿ ಮೊದಲ ಬಾರಿಗೆ ಮತ ಚಲಾಯಿಸಲಿರುವ ನನ್ನ ಯುವ ಮಿತ್ರರಲ್ಲಿ ವಿಶೇಷ ಮನವಿ ಮಾಡುತ್ತೇನೆ. ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ, ಪ್ರತಿ ಮತವೂ ಅಮೂಲ್ಯವಾಗಿದೆ ಮತ್ತು ಪ್ರತಿ ಧ್ವನಿಯೂ ಮುಖ್ಯವಾಗಿದೆ' ಎಂದು ವಿವಿಧ ಭಾಷೆಗಳಲ್ಲಿ ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.