ADVERTISEMENT

ಒಡಿಶಾ: BJD ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಪಿಟಿಐ
Published 27 ಮಾರ್ಚ್ 2024, 14:15 IST
Last Updated 27 ಮಾರ್ಚ್ 2024, 14:15 IST
   

ಭುವನೇಶ್ವರ: ಬಿಜು ಜನತಾ ದಳ (ಬಿಜೆಡಿ) ಅಧ್ಯಕ್ಷ ನವೀನ್ ಪಟ್ನಾಯಕ್ ಅವರು ಬುಧವಾರ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜ್ಯದ 21 ಲೋಕಸಭಾ ಕ್ಷೇತ್ರಗಳ ಪೈಕಿ 9 ಕ್ಷೇತ್ರಗಳಿಗೆ ಉಮೇದುವಾರರನ್ನು ಪ್ರಕಟಿಸಿದ್ದಾರೆ.

ಬಿಜೆಡಿ ಪ್ರಧಾನ ಕಾರ್ಯದರ್ಶಿ ಪ್ರಣವ್ ಪ್ರಕಾಶ್ ದಾಸ್ ಅವರು ಸಂಬಲ್‌ಪುರ ಕ್ಷೇತ್ರದಲ್ಲಿ ಕೇಂದ್ರ ಸಚಿವ ಮತ್ತು ಬಿಜೆಪಿ ಅಭ್ಯರ್ಥಿ ಧರ್ಮೇಂದ್ರ ಪ್ರಧಾನ್ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಭಾರತ ಹಾಕಿ ತಂಡದ ಮಾಜಿ ಆಟಗಾರ ದಿಲೀಪ್ ಟಿರ್ಕಿ ಸುಂದರ್‌ಗಢ ಲೋಕಸಭಾ ಕ್ಷೇತ್ರದ ಹಾಲಿ ಸಂಸದ, ಮಾಜಿ ಕೇಂದ್ರ ಸಚಿವ ಜುಯಲ್ ಓರಂ ಅವರನ್ನು ಎದುರಿಸಲಿದ್ದಾರೆ.

ಇದಲ್ಲದೇ ರಾಜ್ಯದ 147 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಡಿ 72 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.