ADVERTISEMENT

Video | ಮಾಂಗಲ್ಯ ಸೂತ್ರ ಜಟಾಪಟಿ: ನರೇಂದ್ರ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

ಪ್ರಜಾವಾಣಿ ವಿಶೇಷ
Published 24 ಏಪ್ರಿಲ್ 2024, 15:12 IST
Last Updated 24 ಏಪ್ರಿಲ್ 2024, 15:12 IST

'ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದರೆ ಮಾಂಗಲ್ಯ ಸೂತ್ರ ಕಿತ್ತುಕೊಳ್ಳುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು. ಅಫಜಲಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಬುಧವಾರ ಮತಯಾಚನೆ ನಡೆಸಿ ಮಾತನಾಡಿದ ಅವರು,' ದೇಶದಲ್ಲಿ 50 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಯಾವ ಮಹಿಳೆಯ ಮಾಂಗಲ್ಯ ಸೂತ್ರ ಕಿತ್ತುಕೊಂಡಿದೆ? ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ತಂದಿದೆ ಹೊರತು ಮಾಂಗಲ್ಯ ಸೂತ್ರ ಕಿತ್ತುಕೊಳ್ಳುವ ಕೆಲಸ ಮಾಡಿಲ್ಲ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.