ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಮಾಣ ಶೇ 65.5 ತಲುಪುವ ಸಾಧ್ಯತೆಯಿದೆ.
ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿತ್ತು. ಮತದಾನ ಪ್ರಮಾಣದ ಅಧಿಕೃತ ಮಾಹಿತಿಯನ್ನು ಚುನಾವಣಾ ಆಯೋಗವು ಭಾನುವಾರ ಬಿಡುಗಡೆಗೊಳಿಸಲಿದೆ.
ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ ಮತ ಚಲಾಯಿಸಲು 16.63 ಕೋಟಿಗೂ ಹೆಚ್ಚು ಮಂದಿ ಅರ್ಹರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.