ADVERTISEMENT

LS Polls 2024 | ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ ಆರಂಭ: PM ಮೋದಿ ಭಾಗಿ

ಪಿಟಿಐ
Published 23 ಮಾರ್ಚ್ 2024, 15:58 IST
Last Updated 23 ಮಾರ್ಚ್ 2024, 15:58 IST
<div class="paragraphs"><p>ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ರಾಜನಾಥ ಸಿಂಗ್ ಹಾಗೂ ಸಮಿತಿಯ ಸದಸ್ಯರು ಪಾಲ್ಗೊಂಡು ಚರ್ಚಿಸಿದರು</p></div>

ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ರಾಜನಾಥ ಸಿಂಗ್ ಹಾಗೂ ಸಮಿತಿಯ ಸದಸ್ಯರು ಪಾಲ್ಗೊಂಡು ಚರ್ಚಿಸಿದರು

   

ಪಿಟಿಐ ಚಿತ್ರ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆ ಶನಿವಾರ ಸಂಜೆ ಆರಂಭಗೊಂಡಿದೆ.

ADVERTISEMENT

ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗಿಯಾಗಿದ್ದಾರೆ. ಸಮಿತಿಯ ಸದಸ್ಯರು ಸಭೆಗೆ ಆಕಾಂಕ್ಷಿಗಳ ಪಟ್ಟಿಯನ್ನು ಓದಿ ಹೇಳಿದರು. ಅಂತಿಮ ಆಯ್ಕೆ ವರಿಷ್ಠರದ್ದಾಗಿರಲಿದೆ ಎಂದು ಮೂಲಗಳು ತಿಳಿಸಿವೆ.

ಈ ಸಭೆಯಲ್ಲಿ ಉತ್ತರ ಪ್ರದೇಶ ಹಾಗೂ ರಾಜಸ್ಥಾನದ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಇದಕ್ಕೂ ಪೂರ್ವದಲ್ಲಿ 291 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಮಿತಿಯು ಎರಡು ಬಾರಿ ಸಭೆ ನಡೆಸಿತ್ತು. ಉತ್ತರ ಪ್ರದೇಶ, ಗುಜರಾತ್, ಪಶ್ಚಿಮ ಬಂಗಾಳ, ರಾಜಸ್ಥಾನ, ಹರಿಯಾಣ, ಕರ್ನಾಟಕ, ತಮಿಳುನಾಡು, ಉತ್ತರಾಖಂಡ, ಕೇರಳ ಹಾಗೂ ತೆಲಂಗಾಣದ ರಾಜ್ಯಗಳಲ್ಲಿರುವ ಕ್ಷೇತ್ರಗಳ ಕುರಿತು ಚರ್ಚೆ ನಡೆದಿತ್ತು.

ಈ ರಾಜ್ಯಗಳ ಇನ್ನೂ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಇನ್ನಷ್ಟೇ ಆಗಬೇಕಿದೆ. ಭೋಜಪುರಿ ಗಾಯಕ ಪವನ್ ಸಿಂಗ್ ಸೇರಿದಂತೆ ಕನಿಷ್ಠ ಮೂವರು ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದಾರೆ. ಈ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆಯಬೇಕಿದೆ.

ಈವರೆಗೂ ಮುಂಚೂಣಿ ಹೆಸರುಗಳಾದ ನರೇಂದ್ರ ಮೋದಿ, ರಾಜನಾಥ ಸಿಂಗ್, ನಿತಿನ್ ಗಡ್ಕರಿ ಅವರು ಈ ಹಿಂದೆ ಸ್ಪರ್ಧಿಸಿದ್ದ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ. 

543 ಲೋಕಸಭಾ ಕ್ಷೇತ್ರಗಳಿಗೆ ಏ. 19ರಿಂದ ಜೂನ್ 1ರವರೆಗೆ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ, ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.