ADVERTISEMENT

LS polls | ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ 23 ರಾಷ್ಟ್ರಗಳ ಪ್ರತಿನಿಧಿಗಳು

ಪಿಟಿಐ
Published 4 ಮೇ 2024, 14:27 IST
Last Updated 4 ಮೇ 2024, 14:27 IST
   

ನವದೆಹಲಿ: ಆಸ್ಟ್ರೇಲಿಯಾ, ರಷ್ಯಾ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ದೇಶ ಸೇರಿದಂತೆ 23 ದೇಶಗಳ ಚುನಾವಣಾ ನಿರ್ವಹಣಾ ಸಂಸ್ಥೆಗಳ ಪ್ರತಿನಿಧಿಗಳು ಲೋಕಸಭಾ ಚುನಾವಣಾ ಪ್ರಕ್ರಿಯೆಯ ಬಗ್ಗೆ ತಿಳಿದುಕೊಳ್ಳಲು ಭಾರತಕ್ಕೆ ಬಂದಿದ್ದಾರೆ.  

ಒಟ್ಟು 75 ಪ್ರತಿನಿಧಿಗಳು ಸಣ್ಣ ಗುಂಪುಗಳಲ್ಲಿ ಆರು ರಾಜ್ಯಗಳಿಗೆ ಭೇಟಿ ನೀಡಲಿದ್ದು, ವಿವಿಧ ಲೋಕಸಭಾ ಕ್ಷೇತ್ರಗಳ ಚುನಾವಣಾ ಸಿದ್ಧತೆಯನ್ನು ಅವಲೋಕಿಸಲಿದ್ದಾರೆ.

ಚುನಾವಣಾ ಪ್ರಕ್ರಿಯೆಯ ವೀಕ್ಷಣೆಗೆ ವಿದೇಶಿ ಪ್ರತಿನಿಧಿಗಳು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿರುವುದು ಇದೇ ಮೊದಲು ಎಂದು ಚುನಾವಣಾ ಆಯೋಗವು ಹೇಳಿದೆ. ಶನಿವಾರ ಆರಂಭವಾಗಿರುವ ಪ್ರವಾಸ ಕಾರ್ಯಕ್ರಮದಲ್ಲಿ ಭಾರತೀಯ ಚುನಾವಣಾ ವ್ಯವಸ್ಥೆಯ ಸೂಕ್ಷ್ಮತೆಗಳು ಮತ್ತು ಅಳವಡಿಸಿಕೊಂಡಿರುವ ಉತ್ತಮ ಪದ್ಧತಿಗಳನ್ನು ಪರಿಚಯಿಸಲಾಗುತ್ತದೆ.

ADVERTISEMENT

ವಿದೇಶಿ ಪ್ರತಿನಿಧಿಗಳು ಮಹಾರಾಷ್ಟ್ರ, ಗೋವಾ, ಗುಜರಾತ್, ಕರ್ನಾಟಕ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.