
ಪ್ರಜಾವಾಣಿ ವಾರ್ತೆ
ಚೆನ್ನೈ: ತೆಲಂಗಾಣ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದ ತಮಿಳ್‌ಇಸೈ ಸೌಂದರರಾಜನ್ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಸಮ್ಮುಖದಲ್ಲಿ ತಮಿಳ್ ಇಸೈ ಬುಧವಾರ ಬಿಜೆಪಿ ಸೇರಿದರು.
ಬಿಜೆಪಿ ಸೇರ್ಪಡೆ ಕುರಿತು ಡಿಎಂಕೆ ಮತ್ತು ಎಡಪಕ್ಷಗಳು ತಮಿಳ್‌ಇಸೈ ಅವರನ್ನು ಟೀಕಿಸಿವೆ. ಇದಕ್ಕೆ ತಿರುಗೇಟು ನೀಡಿದ ಅಣ್ಣಾಮಲೈ ‘ಉನ್ನತ ಹುದ್ದೆಯಲ್ಲಿರುವವರು ಅಧಿಕಾರವನ್ನು ತೊರೆದು ಸಾಮಾನ್ಯ ವ್ಯಕ್ತಿಯಾಗಿ ಸಾರ್ವಜನಿಕರಿಗಾಗಿ ಮತ್ತೆ ಕೆಲಸ ಮಾಡಲು ಆರಂಭಿಸುವುದು ಸಾಧ್ಯವಿರುವುದು ಬಿಜೆಪಿಯಲ್ಲಿ ಮಾತ್ರ’ ಎಂದು ಸಮರ್ಥಿಸಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.