ಮತದಾನಕ್ಕೆ ಸಾಲಿನಲ್ಲಿ ನಿಂತ ಜನರು
ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ಶನಿವಾರ ನಡೆಯುತ್ತಿದ್ದು ಮದ್ಯಾಹ್ನ 1 ಗಂಟೆ ವೇಳೆಗೆ ಶೇ 39.13 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಹೇಳಿದ್ದಾರೆ.
ದೆಹಲಿ ಶೇ 34.37ರಷ್ಟು ಕಡಿಮೆ ಮತದಾನವಾದರೇ, ಪಶ್ಚಿಮ ಬಂಗಾಳದಲ್ಲಿ ಶೇ 54.80ರಷ್ಟು ಹೆಚ್ಚಿನ ಮತದಾನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಸಣ್ಣಪುಟ್ಟ ಗಲಾಟೆಗಳನ್ನು ಹೊರತುಪಡಿಸಿದರೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
6ನೇ ಹಂತದಲ್ಲಿ ಒಟ್ಟು 58 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 889 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದೇ ಹಂತದಲ್ಲಿ ಒಡಿಶಾದ 42 ವಿಧಾನಸಭಾ ಕ್ಷೇತ್ರಗಳಿಗೂ ಮತದಾನ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.