ADVERTISEMENT

LS polls: TMC ಪ್ರಣಾಳಿಕೆ ಬಿಡುಗಡೆ, ಉದ್ಯೋಗ, ವಸತಿ ಸೇರಿ ಭರವಸೆಗಳು ಇಂತಿವೆ

ಪಿಟಿಐ
Published 17 ಏಪ್ರಿಲ್ 2024, 11:40 IST
Last Updated 17 ಏಪ್ರಿಲ್ 2024, 11:40 IST
<div class="paragraphs"><p>ಮಮತಾ ಬ್ಯಾನರ್ಜಿ</p></div>

ಮಮತಾ ಬ್ಯಾನರ್ಜಿ

   

ಕೋಲ್ಕತ್ತ: ಲೋಕಸಭಾ ಚುನಾವಣೆ ಅಂಗವಾಗಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಬುಧವಾರ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರದ್ದು  ಮಾಡುವುದು ಸೇರಿದಂತೆ ಅನೇಕ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡುವುದಾಗಿ ಭರವಸೆ ನೀಡಿದೆ.

ADVERTISEMENT

ಪಕ್ಷದ ಇಲ್ಲಿನ ಕೇಂದ್ರ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಟಿಎಂಸಿ ನಾಯಕ ಅಮಿತ್‌ ಮಿಶ್ರಾ, ‘ಬೆಲೆ ಸ್ಥಿರತೆ ಸೂತ್ರದ ಮೂಲಕ ಪೆಟ್ರೋಲ್‌ ಮತ್ತು ಡೀಸೆಲ್ ಬೆಲೆಯನ್ನು ನಿಯಂತ್ರಿಸುತ್ತೇವೆ. ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ರದ್ದು ಮಾಡುತ್ತೇವೆ’ ಎಂದು ಹೇಳಿದರು.

ಮನೆ ಬಾಗಿಲಿಗೆ ಪಡಿತರ ವ್ಯವಸ್ಥೆ ಮತ್ತು ಬಿಪಿಎಲ್‌ ಕುಟುಂಬಗಳಿಗೆ ಉಚಿತವಾಗಿ 10 ಅಡುಗೆ ಅನಿಲ ಸಿಲಿಂಡರ್‌ ನೀಡುವುದಾಗಿ ಆಶ್ವಾಸನೆ ನೀಡಿದರು.

ರಾಜ್ಯದಲ್ಲಿ ಸೀಟು ಹಂಚಿಕೆ ವಿಷಯವಾಗಿ ಒಮ್ಮತಕ್ಕೆ ಬರಲು ಸಾಧ್ಯವಾಗದೆ ಟಿಎಂಸಿಯು ಕಳೆದ ಜನವರಿಯಲ್ಲಿ ಇಂಡಿಯಾ ಒಕ್ಕೂಟದಿಂದ ಹೊರಬಂದಿತ್ತು. ಆದರೆ ರಾಷ್ಟ್ರ ಮಟ್ಟದಲ್ಲಿ ‘ಇಂಡಿಯಾ’ ಬೆಂಬಲಿಸುವುದಾಗಿ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.