
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರದ ಸಚಿವ ಸಂಪುಟ ಸಭೆ ಆರಂಭವಾಗಿದೆ. ಲೋಕಸಭೆ ಚುನಾವಣೆ ಫಲಿತಾಂಶ ಮತ್ತು ಮಿತ್ರಪಕ್ಷಗಳ ಜೊತೆ ಸೇರಿ ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಮಂತ್ರಿ ಪರಿಷತ್ತಿನ ಸಭೆ ಬೆನ್ನಲ್ಲೇ ಸಚಿವ ಸಂಪುಟದ ಸಭೆ ನಡೆಯುತ್ತಿದೆ.
ನರೇಂದ್ರ ಮೋದಿ ಪ್ರಧಾನಿಯಾಗಿ ಎರಡನೇ ಅವಧಿಯ ಕೊನೆಯ ಸಚಿವ ಸಂಪುಟ ಸಭೆ ಇದಾಗಿದೆ. ಹಾಲಿ ಲೋಕಸಭೆಯ ಅವಧಿಯು ಜೂನ್ 16ಕ್ಕೆ ಮುಕ್ತಾಯವಾಗಲಿದ್ದು, ಅಷ್ಟರೊಳಗೆ ಹೊಸ ಸರ್ಕಾರ ರಚನೆಯಾಗಬೇಕಿದೆ.
ಮಂಗಳವಾರ ಹೊರಬಿದ್ದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನ ಸೇರಿ ಎನ್‌ಡಿಎ ಮೈತ್ರಿಕೂಟ 293 ಸ್ಥಾನಗಳನ್ನು ಪಡೆದಿದೆ. ಕಾಂಗ್ರೆಸ್ 99 ಸೇರಿ ಇಂಡಿಯಾ ಮೈತ್ರಿಕೂಟ 234 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ.
16 ಸ್ಥಾನಗಳನ್ನು ಪಡೆದಿರುವ ಟಿಡಿಪಿ ಮತ್ತು 12 ಸ್ಥಾನ ಪಡೆದಿರುವ ಜೆಡಿಯು ಕಿಂಗ್ ಮೇಕರ್‌ಗಳಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.