ADVERTISEMENT

ಉಡುಪಿ–ಚಿಕ್ಕಮಗಳೂರು: ಜೆಡಿಎಸ್‌ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ನಾಮಪತ್ರ

ನಾಮಪತ್ರ ಸಲ್ಲಿಕೆಗೂ ಮುನ್ನ ಕಾಂಗ್ರೆಸ್‌ ಜೆಡಿಎಸ್ ಮುಖಂಡರ ಸಭೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2019, 14:53 IST
Last Updated 25 ಮಾರ್ಚ್ 2019, 14:53 IST
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ ಜೆಡಿಎಸ್‌ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ನಾಮಪತ್ರ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ ಜೆಡಿಎಸ್‌ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ನಾಮಪತ್ರ ಸಲ್ಲಿಸಿದರು.   

ಉಡುಪಿ: ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್‌ ಸೋಮವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭ ಉಡುಪಿ ಉಸ್ತುವಾರಿ ಸಚಿವೆ ಜಯಮಾಲಾ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ವಿಜಯಕುಮಾರ್, ಮುಖಂಡ ಎಂ.ಎ.ಗಫೂರ್ ಇದ್ದರು. ಪ್ರಮೋದ್ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಮೋದ್ ‘ನಾರಾಯಣ ಗುರುಗಳ ತತ್ವದಡಿ ಚುನಾವಣೆ ಎದುರಿಸುತ್ತೇನೆ. ಕೆಲಸ ಮಾಡುವ ಅಭ್ಯರ್ಥಿಯನ್ನು ಮತದಾರರು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸ ಇದೆ’ ಎಂದರು.

ADVERTISEMENT

ಇದಕ್ಕೂ ಮುನ್ನ ಕಾಂಗ್ರೆಸ್‌ ಕಚೇರಿಯಲ್ಲಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ನಡೆಯಿತು. ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರನ್ನು ಬೆಂಬಲಿಸುವಂತೆ ನಾಯಕರು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.