ADVERTISEMENT

ಅಳುವುದು ನೀತಿ ಸಂಹಿತೆ ಉಲ್ಲಂಘನೆ: ಪುಟ್ಟಣ್ಣಯ್ಯ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2014, 19:30 IST
Last Updated 25 ಮಾರ್ಚ್ 2014, 19:30 IST
ಪುಟ್ಟಣ್ಣಯ್ಯ
ಪುಟ್ಟಣ್ಣಯ್ಯ   

ವಿಜಾಪುರ: ‘ಚುನಾವಣಾ ಪ್ರಚಾರ ಸಭೆಗಳಲ್ಲಿ ನಾಯಕರು ಕಣ್ಣೀರು ಸುರಿ­ಸುವ (ಅಳುವ) ಮೂಲಕ ಮತದಾರರ ಮೇಲೆ ಭಾವನಾತ್ಮಕವಾಗಿ ಪ್ರಭಾವ ಬೀರುತ್ತಾರೆ. ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ. ಹೀಗೆ ಕಣ್ಣೀರು ಹಾಕುವ ನಾಯಕರನ್ನು ಬಂಧಿಸಿ ಜೈಲಿಗೆ ಹಾಕಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ, ಶಾಸಕ ಕೆ.ಎಸ್‌. ಪುಟ್ಟಣ್ಣಯ್ಯ ಆಗ್ರಹಿಸಿದರು.

ಪ್ರಚಾರ ಸಭೆಗಳಲ್ಲಿ ಕಣ್ಣೀರು ಸುರಿ­ಸುವುದನ್ನು ನಿಷೇಧಿಸಬೇಕು. ಕಣ್ಣೀರು ಹಾಕುವವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ದಾಖಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕುಮಾರಸ್ವಾಮಿ, ದೇವೇಗೌಡರು ಸಾರ್ವಜನಿಕ ಸಭೆ–ಸಮಾರಂಭಗಳಲ್ಲಿ ಅಳುವುದು ಏಕೆ? ಪ್ರಜಾಪ್ರಭುತ್ವವನ್ನು ಸಂಪೂರ್ಣ ನಾಶಮಾಡಿದ್ದೇವೆ ಎಂಬ ಕಾರಣಕ್ಕೆ ಅಳುತ್ತಾರೋ ಗೊತ್ತಿಲ್ಲ’ ಎಂದರು. ಚುನಾವಣೆ ಮುಗಿದ ನಂತರ ದಿನವೂ ಅಳಲಿ.
‘ಧೂಮಪಾನ ವಲಯ’­ದಂತೆಯೇ ಬೇಕಿದ್ದರೆ ‘ಅಳುವ ವಲಯ’ ಗಳನ್ನು ನಿಗದಿ ಮಾಡಲಿ ಎಂದು ವ್ಯಂಗ್ಯವಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.