ಕನಕಪುರ: ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ತಾಲ್ಲೂಕಿನಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದ್ದು, ಜೆ.ಡಿ.ಎಸ್ ಅತೃಪ್ತ ನಾಯಕರು ಮತ್ತು ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.
ಕಸಬಾ ಹೋಬಳಿ ತಿಗಳರಹಳ್ಳಿ ಮತ್ತು ಹಳ್ಳಸಂದ್ರ ಗ್ರಾಮದ ಜೆ.ಡಿ.ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನೂರಾರು ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ತಿಗಳರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಟಿ.ಆರ್.ಶ್ರೀನಿವಾಸ್ ನೇತೃತ್ವದಲ್ಲಿ ಪಕ್ಷವನ್ನು ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಪಕ್ಷಕ್ಕೆ ಬಂದ ನೂರಾರು ಮುಖಂಡರನ್ನು ಸಂಸದ ಡಿ.ಕೆ.ಸುರೇಶ್ ಅವರು ಪಕ್ಷದ ಶಾಲನ್ನು ಹಾಕುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸೇರ್ಪಡೆಯ ನಾಯಕತ್ವ ವಹಿಸಿದ್ದ ಟಿ.ಆರ್.ಶ್ರೀನಿವಾಸ್ ಮಾತನಾಡಿ, ‘ಜೆ.ಡಿ.ಎಸ್ ಪಕ್ಷದಲ್ಲಿ ಪ್ರಮಾಣಿಕ ಕಾರ್ಯಕರ್ತರಾಗಿ ಕೆಲಸ ಮಾಡಿ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಹೋರಾಟ ನಡೆಸಿ ಗೆಲವು ಸಾಧಿಸಿದೆ. ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರು ತಾಲ್ಲೂಕಿನ ಜನತೆಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್ ಸೇರಿದೆ ಎಂದು ಅವರು ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿಲೀಪ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ಡಿ.ವಿಜಯ ದೇವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಯಸಂದ್ರರವಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.