ರಾಮನಗರ: ‘ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕೆಜೆಪಿ ಅಭ್ಯರ್ಥಿಯಾಗಿ ನಾನೇ ಕಣಕ್ಕಿಳಿಯುತ್ತೇನೆ’ ಎಂದು ಕೆಜೆಪಿ ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನ ಕುಮಾರ್ ತಿಳಿಸಿದರು.
ಮಂಗಳವಾರ ನಗರದ ಹೋಟೆಲಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಡಿಯೂರಪ್ಪ ಒಬ್ಬ ಅವಕಾಶವಾದಿ ರಾಜಕಾರಣಿ. ಕಷ್ಟಕಾಲದಲ್ಲಿ ಅವರ ಬೆಂಬಲಕ್ಕೆ ನಿಂತಿದ್ದ ಮಾಜಿ ಸಚಿವ ಧನಂಜಯಕುಮಾರ್, ಸಂಸದ ಬಸವರಾಜು, ಮುಖಂಡ ಲಕ್ಷ್ಮಿನಾರಾಯಣ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಾರೆ’ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.