ADVERTISEMENT

ರಾಹುಲ್‌ ವಿರುದ್ಧ ದೂರು

ಗಾಂಧಿ ಹತ್ಯೆಗೆ ಆರ್‌ಎಸ್‌ಎಸ್‌ ಕಾರಣ ಆರೋಪ 

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2014, 19:30 IST
Last Updated 7 ಮಾರ್ಚ್ 2014, 19:30 IST

ಬೆಂಗಳೂರು: ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು (ಆರ್‌ಎಸ್‌ಎಸ್‌) ಹತ್ಯೆ ಮಾಡಿದರೆಂದು ಹೇಳಿಕೆ ನೀಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಶುಕ್ರವಾರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ಆರ್‌ಎಸ್‌ಎಸ್‌ನ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ರಾಮ ಮಾಧವ್‌ ನೇತೃತ್ವದ ನಿಯೋಗ ಮುಖ್ಯ ಚುನಾವಣಾಧಿಕಾರಿ ಅನಿಲ್‌ ಕುಮಾರ ಝಾ ಅವರನ್ನು ಭೇಟಿ ಮಾಡಿ ದೂರು ನೀಡಿತು.

‘ಬಿಜೆಪಿ ಜತೆ ಸಂಪರ್ಕ ಕಲ್ಪಿಸಿ ಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ. ಪೂರ್ವಾಪರ ಯೋಚನೆ ಮಾಡದೆ ಸುಳ್ಳು ಹೇಳಿಕೆಗಳನ್ನು ನೀಡುತ್ತಿರುವ ರಾಹುಲ್‌ ಗಾಂಧಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಅವರು ಆಗ್ರಹಪಡಿಸಿದರು.

ಮಹಾರಾಷ್ಟ್ರದ ಭಿವಂಡಿಯಲ್ಲಿ ಗುರುವಾರ ರಾಹುಲ್‌ ಈ ರೀತಿಯ ಹೇಳಿಕೆ ನೀಡಿದ್ದು, ಇದು ಕೂಡ ನೀತಿ ಸಂಹಿತೆಯ ಉಲ್ಲಂಘನೆ. ಮುಸ್ಲಿಂ ಸಮುದಾಯದವರು ಹೆಚ್ಚು ಇರುವ ಪ್ರದೇಶದಲ್ಲೇ ಈ ರೀತಿ ಮಾತನಾಡಿರುವುದು ಸರಿಯಲ್ಲ  ಎಂದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.