ADVERTISEMENT

ರೂ 11.5 ಲಕ್ಷ ನಗದು ವಶ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2014, 19:30 IST
Last Updated 15 ಮಾರ್ಚ್ 2014, 19:30 IST

ಶ್ರೀರಂಗಪಟ್ಟಣ: ಸೂಕ್ತ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ರೂ11.5 ಲಕ್ಷ ನಗದನ್ನು ಸೆಕ್ಟರಲ್‌ ಮ್ಯಾಜಿಸ್ಟ್ರೇಟ್‌ ಮತ್ತು ಪೊಲೀಸ್‌ ಸಿಬ್ಬಂದಿ ಶನಿವಾರ ತಾಲ್ಲೂಕಿನ ಗಡಿಭಾಗದಲ್ಲಿ ವಶಪಡಿಸಿಕೊಂಡಿದ್ದಾರೆ.

ಮೈಸೂರು– ಶ್ರೀರಂಗಪಟ್ಟಣ ರಸ್ತೆಯ ಕಳಸ್ತವಾಡಿ ಬಳಿ ಕಾರನ್ನು ಚುನಾವಣಾ ಸಿಬ್ಬಂದಿ ತಡೆದು ತಪಾಸಣೆ ನಡೆಸಿದಾಗ ಕಾರಿನಲ್ಲಿ ಹಣ ಇರುವುದು ಪತ್ತೆಯಾಗಿದೆ.

ಮೈಸೂರಿನ ಶ್ರೀರಾಂಪುರ ಬಡಾ­ವಣೆಯ ಎಂ. ನಾಗರಾಜು ಅವರು ಹಣ ಸಾಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಹಾಸನ ಜಿಲ್ಲೆಯ ಹಿರೀಸಾವೆ­ಯಲ್ಲಿರುವ ತಮ್ಮ ಸ್ನೇಹಿತರಿಗೆ ನೀಡಲು ಹಣ ಕೊಂಡೊಯ್ಯುತ್ತಿ­ರು­ವುದಾಗಿ ನಾಗರಾಜು ಅಧಿಕಾರಿಗಳ ಎದುರು ಹೇಳಿದ್ದಾರೆ.

ವಶಪಡಿಸಿಕೊಂಡ ಹಣವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ ಎಂದು ಇನ್‌ಸ್ಪೆಕ್ಟರ್‌ ಜಯಕುಮಾರ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.