ರಾಮನಗರ: ‘ಕಾಂಗ್ರೆಸ್ ಸೇರ್ಪಡೆಗೆ ಪಕ್ಷದ ಹೈಕಮಾಂಡ್ ಹಸಿರು ನಿಶಾನೆ ತೋರಿದ್ದು, ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ’ ಎಂದು ಚನ್ನಪಟ್ಟಣದ ಸಮಾಜವಾದಿ ಪಕ್ಷದ ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು. ‘ಪಕ್ಷ ಸೇರ್ಪಡೆ ಸಂಬಂಧ ಮಂಗಳವಾರ ದೆಹಲಿಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ವಹಿಸಿರುವ ದಿಗ್ವಿಜಯ್ ಸಿಂಗ್ ಅವರೊಂದಿಗೆ ಎರಡನೇ ಸುತ್ತಿನ ಮಾತುಕತೆ ನಡೆಯಿತು. ಸಂಜೆ ವೇಳೆಗೆ ಕಾಂಗ್ರೆಸ್‌ನಿಂದ ಇ–ಮೇಲ್ ಸಂದೇಶ ರವಾನೆಯಾಗಿದ್ದು, ಸೇರ್ಪಡೆಗೆ ಒಪ್ಪಿಗೆ ದೊರೆತಿದೆ’ ಎಂದು ಅವರು ‘ಪ್ರಜಾವಾಣಿ’ಗೆ ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.