ಬೆಂಗಳೂರು: ಇನ್ಫೊಸಿಸ್‌ನ ಸಹ ಸಂಸ್ಥಾಪಕ ಹಾಗೂ ‘ಆಧಾರ್’ ಯೋಜನೆ ಮುಖ್ಯಸ್ಥ ನಂದನ್ ನಿಲೇಕಣಿ ಅವರು ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮೂರು ದಿನಗಳ ಬಳಿಕ ಅವರು ಪದತ್ಯಾಗ ಮಾಡಿದ್ದಾರೆ.
ರಾಜೀನಾಮೆ ಪತ್ರವನ್ನು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕಳುಹಿಸಿರುವುದಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ನಿಲೇಕಣಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.