ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ವಿವಿಧ ಪಕ್ಷಗಳ ಒಟ್ಟು 111 ಜನ ಇದುವರೆಗೆ ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್ಸಿನ 14, ಬಿಜೆಪಿಯ 13 ಮತ್ತು ಜೆಡಿಎಸ್‌ನ 4 ಮಂದಿ ಸೇರಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅನಿಲ್ ಕುಮಾರ್ ಝಾ ತಿಳಿಸಿದರು.
ಆಯೋಗದ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶನಿವಾರ ಒಟ್ಟು 21 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ’ ಎಂದರು.
ಪ್ರಮುಖರು: ಶನಿವಾರ ನಾಮಪತ್ರ ಸಲ್ಲಿಸಿದವರಲ್ಲಿ ವಿಜಾಪುರದಿಂದ ಸಂಸದ ರಮೇಶ್ ಜಿಗಜಿಣಗಿ(ಬಿಜೆಪಿ), ಗುಲ್ಬರ್ಗದಲ್ಲಿ ಬಿ.ಟಿ. ಲಲಿತಾ ನಾಯಕ್(ಎಎಪಿ), ಚಿಕ್ಕಬಳ್ಳಾಪುರದಲ್ಲಿ ಜಿ.ವಿ. ಶ್ರೀರಾಮರೆಡ್ಡಿ (ಸಿಪಿಎಂ), ಚಾಮರಾಜನಗರದಲ್ಲಿ ಆರ್. ಧ್ರುವನಾರಾಯಣ(ಕಾಂಗ್ರೆಸ್) ಸೇರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.