ADVERTISEMENT

ಚಿಕ್ಕಮಗಳೂರು: ಮೋದಿ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಬಂಧನ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2024, 6:41 IST
Last Updated 26 ಮಾರ್ಚ್ 2024, 6:41 IST
<div class="paragraphs"><p>ಬಿಜೆಪಿ  ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.</p></div>

ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

   

ಚಿಕ್ಕಮಗಳೂರು: 'ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿಯಿರಿ' ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಖಂಡಿಸಿ ಸಚಿವ ಕೆ.ಜೆ.ಜಾರ್ಜ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಎದುರು ಘೋಷಣೆ ಕೂಗಲು ಬಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕಾರ್ಯಕರ್ತರ ಸಭೆ ನಡೆಸಲು ಕೆ.ಜೆ.ಜಾರ್ಜ್‌ ಮತ್ತು ಜಯಪ್ರಕಾಶ್ ಹೆಗ್ಡೆ ನಗರಕ್ಕೆ ಬಂದಿದ್ದರು. ಆದ್ರಿಕ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿ ನಡೆಯುತ್ತಿರುವ ಮಾಹಿತಿ ತಿಳಿದು ಘೋಷಣೆ ಕೂಗಲು 20ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಮೋದಿ ಭಾವಚಿತ್ರ ಹಿಡಿದು ಜಮಾಯಿಸಿದ್ದರು.

ADVERTISEMENT

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ ನೇತೃತ್ವದಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು, ಎಲ್ಲರನ್ನೂ ಬಂಧಿಸಿ ಕರೆದೊಯ್ದರು.

'ನಾವು ಗಲಾಟೆ ಮಾಡಲು ಬಂದಿಲ್ಲ. ಪ್ರತಿಭಟನೆ ಮಾಡಲು ಬಂದಿದ್ದೇವೆ. ಆದರೂ ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ' ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.