ADVERTISEMENT

ನಾಮಪತ್ರ ಸಲ್ಲಿಕೆ ವೇಳೆ ಕನಕಪುರ, ಚನ್ನಪಟ್ಟಣದಲ್ಲಿ ಬಿಜೆಪಿ ಅಬ್ಬರ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2023, 8:30 IST
Last Updated 18 ಏಪ್ರಿಲ್ 2023, 8:30 IST
   

ರಾಮನಗರ: ಜಿಲ್ಲೆಯ ಚನ್ನಪಟ್ಟಣ ಹಾಗೂ ಕನಕಪುರದಲ್ಲಿ ಮಂಗಳವಾರ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಜೊತೆಗೆ ಶಕ್ತಿ ಪ್ರದರ್ಶನವನ್ನೂ ಮಾಡಿದರು.

ಕನಕಪುರದಲ್ಲಿ ಸಚಿವ ಆರ್. ಅಶೋಕ್ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದರು. ಅವರಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವ ಅಶ್ವತ್ಥನಾರಾಯಣ ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದರು. ಬಳಿಕ ತಹಶೀಲ್ದಾರ್ ಕಚೇರಿಯಲ್ಲಿ ಅವರು ಉಮೇದುವಾರಿಕೆ ಸಲ್ಲಿಸಿದರು.

ಚನ್ನಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ನಾನಾ ದೇವಾಲಯಗಳಿಗೆ ಭೇಟಿ ಕೊಟ್ಟ ಸಿ.ಪಿ. ಯೋಗೇಶ್ವರ್ ಹೆದ್ದಾರಿಯಲ್ಲಿ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ಮಾಡಿದರು. ಬಳಿಕ ಸ್ಥಳೀಯ ಮುಖಂಡರ ಜೊತೆಗೂಡಿ ನಾಮಪತ್ರ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.