ADVERTISEMENT

ಬಿಜೆಪಿಯವರು ನನ್ನ ಶವದ ಮೇಲೆ ಚುನಾವಣೆ ನಡೆಸಲು ಸಜ್ಜಾಗಿದ್ದಾರೆ: ಪ್ರಿಯಾಂಕ್ ಖರ್ಗೆ

ಪ್ರಜಾವಾಣಿ ವಿಶೇಷ
Published 28 ಮಾರ್ಚ್ 2024, 10:20 IST
Last Updated 28 ಮಾರ್ಚ್ 2024, 10:20 IST

‘ಬಿಜೆಪಿಯ ಮನುವಾದಿಗಳು ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಜೀವ ಬೆದರಿಕೆಯ ಪತ್ರ ಬರೆದು ಹತ್ತು ದಿನಗಳ ಹಿಂದೆ ನನ್ನ ಕಚೇರಿಗೆ ಕಳುಹಿಸಿದ್ದಾರೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಕಲಬುರಗಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಕೆಲವು ಕೆಟ್ಟಪದಗಳನ್ನು ಬಳಸಿ ನನ್ನ ಕುಟುಂಬ ಸದಸ್ಯರನ್ನು ನಿಂದಿಸಿದ್ದಾರೆ. ಜಾತಿ ಹೆಸರನ್ನು ಸಹ ಉಲ್ಲೇಖ ಮಾಡಿದ್ದಾರೆ. ಕಲಬುರಗಿಯಿಂದ ಬೆಂಗಳೂರಿನ ವಿಕಾಸ ಸೌಧದ ನನ್ನ ಕಚೇರಿಗೆ ಬಂದಿದೆ. ವಿಧಾನ ಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದರು. ‘ಬಿಜೆಪಿಯ ಮುಖಂಡರು ನನ್ನ ಶವದ ಮೇಲೆ ಚುನಾವಣೆ ನಡೆಸಲು ಸಜ್ಜಾಗಿದ್ದಾರೆ’ ಎಂದೂ ಅವರು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.