ADVERTISEMENT

ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಯತೀಂದ್ರಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2024, 15:08 IST
Last Updated 1 ಏಪ್ರಿಲ್ 2024, 15:08 IST
<div class="paragraphs"><p>ಡಾ. ಯತೀಂದ್ರ&nbsp;ಸಿದ್ದರಾಮಯ್ಯ</p></div>

ಡಾ. ಯತೀಂದ್ರ ಸಿದ್ದರಾಮಯ್ಯ

   

ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗೂಂಡಾ, ರೌಡಿ ಎಂದು ಕರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಶಿಲ್ಪಾ ನಾಗ್‌ ನೋಟಿಸ್‌ ಜಾರಿ ಮಾಡಿದ್ದಾರೆ. 

ಹೇಳಿಕೆ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿ ನೋಟಿಸ್‌ ಜಾರಿ ಮಾಡಿರುವುದನ್ನು ‘ಪ್ರಜಾವಾಣಿ’ಗೆ ದೃಢಪಡಿಸಿರುವ ಶಿಲ್ಪಾ ನಾಗ್‌, ‘ಫ್ಲೈಯಿಂಗ್‌ ಸ್ಕ್ಯಾಡ್‌, ಸ್ಥಳೀಯ ಚುನಾವಣಾಧಿಕಾರಿ ಮತ್ತು ಮಾದರಿ ನೀತಿ ಸಂಹಿತೆ ಜಾರಿ ನೋಡೆಲ್‌ ಅಧಿಕಾರಿ ಅವರು ನೀಡಿರುವ ವರದಿಗಳ ಆಧಾರದಲ್ಲಿ ನೋಟಿಸ್‌ ನೀಡಲಾಗಿದೆ’ ಎಂದು ಹೇಳಿದರು. 

ADVERTISEMENT

ಜಿಲ್ಲೆಯ ಹನೂರಿನಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಯತೀಂದ್ರ ಅವರು ಗೃಹ ಸಚಿವ ಅಮಿತ್‌ ಶಾ ವಿರುದ್ಧ ಹರಿಹಾಯ್ದಿದ್ದರು. ಈ ವೇಳೆ, ‘ಅವರೊಬ್ಬ, ಗೂಂಡಾ, ರೌಡಿ. ಗುಜರಾತ್‌ನಲ್ಲಿ ಅವರ ಮೇಲೆ ಕೊಲೆ ಪ್ರಕರಣಗಳಿವೆ. ಅಂತಹವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ’ ಎಂದು ಟೀಕಿಸಿದ್ದರು.  

ಈ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ, ಯತೀಂದ್ರ ವಿರುದ್ಧ ಚುನಾವಣಾ ಅಧಿಕಾರಿಯವರಿಗೆ ದೂರು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.