ADVERTISEMENT

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದರು

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದರು

ಪ್ರಜಾವಾಣಿ ವಿಶೇಷ
Published 20 ಮೇ 2023, 9:55 IST
Last Updated 20 ಮೇ 2023, 9:55 IST
   

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿಕೆಶಿ ಇಂದು ಪ್ರಮಾಣವಚನ ಸ್ವೀಕಾರ

ಕಂಠೀರವ ಕ್ರೀಡಾಂಗಣ

ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ.

ಸಿದ್ದರಾಮಯ್ಯ, ಡಿಕೆಶಿ ಜತೆಗೆ 8 ಶಾಸಕರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಹಾಗೂ ಮಂತ್ರಿಗಳಾಗಿ 8 ಶಾಸಕರು ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕರಿಸುವರು.

1) ಡಾ. ಜಿ. ಪರಮೇಶ್ವರ್‌

2) ಕೆ.ಎಚ್‌.ಮುನಿಯಪ್ಪ

ADVERTISEMENT

3) ಕೆ.ಜೆ. ಜಾರ್ಜ್‌

4) ಎಂ.ಬಿ.ಪಾಟೀಲ್‌

5) ಸತೀಶ್‌ ಜಾರಕಿಹೊಳಿ

6) ಪ್ರಿಯಾಂಕ್‌ ಖರ್ಗೆ

7) ರಾಮಲಿಂಗಾ ರೆಡ್ಡಿ

8) ಜಮೀರ್‌ ಅಹ್ಮದ್ ಖಾನ್‌ 

ಯಾರಿಗೆ ಸಿಕ್ಕಿದೆ ಮಂತ್ರಿ ಭಾಗ್ಯ?

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಹಾಗೂ ಮಂತ್ರಿಗಳಾಗಿ 8 ಶಾಸಕರು ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕರಿಸುವರು ಎಂದು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಸಮಾರಂಭದಲ್ಲಿ ನಾನು ಕೂಡ ಭಾಗವಹಿಸುವೆ ಎಂದು ಹೇಳಿದರು.

ರಾಜಧಾನಿ ಬೆಂಗಳೂರಿನಲ್ಲಿ  ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರ ನಾಯಕರ ಬ್ಯಾನರ್‌ ಹಾಗೂ ಪೊಸ್ಟರ್‌ಗಳು ರಾರಾಜಿಸುತ್ತಿವೆ.

ಕಂಠೀರವ ಕ್ರೀಡಾಂಗಣದ ಮುಂಭಾಗ ಸಿದ್ದರಾಮಯ್ಯ ಅಭಿಮಾನಿಗಳ ಸಂಭ್ರಮ...

ಜಾರ್ಖಂಡ್‌ ರಾಜ್ಯದ ಮುಖ್ಯಮಂತ್ರಿ ಹೇಮಂತ್‌ ಸೂರೇನ್‌ ಪ್ರಮಾಣವಚನ ಸಮಾರಂಭಕ್ಕೆ ಬರುತ್ತಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಿಂದ ಪದಗ್ರಹಣ ಸಮಾರಂಭಕ್ಕೆ ಜನಸಾಗರವೇ ಹರಿದು ಬರುತ್ತಿದೆ.

ಬೆಂಗಳೂರಿನ ಕಂಠೀರ ಸ್ಟೇಡಿಯಂಗೆ ಆಗಮಿಸುತ್ತಿರುವ ಅಭಿಮಾನಿಗಳು, ಕಾಂಗ್ರೆಸ್‌ ಕಾರ್ಯಕರ್ತರು....

  • ಕಂಠೀರವ ಕ್ರಿಡಾಂಗಣದತ್ತ ಸಾಗಿ ಬರುತ್ತಿರುವ ಕಾಂಗ್ರೆಸ್‌ ಅಭಿಮಾನಿಗಳು ಮತ್ತು ಕಾರ್ಯಕರ್ತರು

  • ನೂತನ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿರುವ ಬೆಂಗಳೂರಿನ ಕಂಠೀರವ ಸ್ಟೇಡಿಯಂ ಹತ್ತಿರದ ಸೆಂಟ್‌ ಜೋಸೇಫ್‌ ಕಾಲೇಜಿಗೆ ಸಿಇಟಿ ಬರೆಯಲು ಬಂದಿದ್ದ ವಿದ್ಯಾರ್ಥಿನಿಯೊಬ್ಬರು, ದಾಖಲೆಗಳನ್ನು ಹೊಂದಿಸಿಕೊಳ್ಳುತ್ತಿದ್ದ ದೃಶ್ಯ.

  • ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ಮತ್ತು ಎಂಟು ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಿರುವ ಬೆಂಗಳೂರಿನ ಕಂಠೀರ ಸ್ಟೇಡಿಯಂಗೆ ಆಗಮಿಸುತ್ತಿರುವ ಅಭಿಮಾನಿಗಳು, ಕಾಂಗ್ರೆಸ್‌ ಕಾರ್ಯಕರ್ತರು.

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಜೊತೆಗೆ ಮಂತ್ರಿಗಳಾಗಿ 8 ಶಾಸಕರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕರಮಾಡಲಿದ್ದಾರೆ. ಇದರ ಲೈವ್‌ ವಿಡಿಯೊ ನೋಡಿ... 

ನೂತನ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಬರಮಾಡಿಕೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌

ಪದಗ್ರಹಣ ಸಮಾರಂಭಕ್ಕಾಗಿ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದರು

 ಸಿದ್ಧರಾಮಯ್ಯ ತಮ್ಮ ನಿವಾಸದಿಂದ ಕಂಠೀರವ ಕ್ರೀಡಾಂಗಣಕ್ಕೆ ಪೊಲೀಸ್‌ ಭದ್ರತೆಯಲ್ಲಿ ತೆರಳಿದರು.

ಕಂಠೀರವ ಸ್ಟೇಡಿಯಂನಲ್ಲಿ ಸಿದ್ದು ಮೇನಿಯಾ

ಕಂಠೀರವ ಕ್ರೀಡಾಂಗಣಕ್ಕೆ ಡಿ.ಕೆ. ಶಿವಕುಮಾರ್‌ ಆಗಮಿಸಿದರು. ಜನರತ್ತ ಕೈ ಬೀಸಿದರು. ಬಳಿಕ ಜನರಿಗೆ ವಂದಿಸಿದರು.

ಕ್ರೀಡಾಂಗಣದತ್ತ ಸಿದ್ದು, ಡಿಕೆಶಿ

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಂಠೀರವ ಕ್ರೀಡಾಂಗಣ ದತ್ತ ಹೊರಟಿದ್ದಾರೆ. ಇದಕ್ಕೂ ಮೊದಲು ಶಾಂಗ್ರಿಲಾ ಹೋಟೆಲ್‌ನಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ‌ ಅವರನ್ನು ಭೇಟಿ ಮಾಡಲಿದ್ದಾರೆ.‌ ಅಲ್ಲಿಂದ ನೇರವಾಗಿ ಕ್ರೀಡಾಂಗಣಕ್ಕೆ ಬರಲಿದ್ದಾರೆ.

ಕಂಠೀರವ ಕ್ರೀಡಾಂಗಣ ತಲುಪಲು ಹರಸಾಹಸ

ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ ನಡೆಯುತ್ತಿದ್ದು ಸುತ್ತಲೂ ಜನವೋ ಜನ. ಎಲ್ಲಿ ನೋಡಿದರೂ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ, ಡಿಕೆಶಿ ಹಾಗೂ ಕಾಂಗ್ರೆಸ್ ಮುಖಂಡರು ಅಭಿಮಾನಿಗಳೇ ಕಾಣಿಸುತ್ತಿದ್ದಾರೆ. ಜನರು ನಡೆದೇ ಕ್ರೀಡಾಂಗಣದ ಬರುತ್ತಿದ್ದಾರೆ. ಕೆಲವರನ್ನು ಮಧ್ಯದಲ್ಲಿಯೇ ತಡೆಯಲಾಗುತ್ತಿದೆ. ಕ್ರೀಡಾಂಗಣ ತಲುಪುವುದಕ್ಕೆ‌‌ ಜನರು ಹರಸಾಹಸ ಪಡುತ್ತಿದ್ದಾರೆ.

ಪದಗ್ರಹಣ ಕಾರ್ಯಕ್ರಮಕ್ಕೆ ಕ್ಷಣಗಣನೆ

ಪದಗ್ರಹಣ ಸಮಾರಂಭಕ್ಕೆ ನಟ ಶಿವರಾಜ್‌ ಕುಮಾರ್‌, ದುನಿಯಾ ವಿಜಯ್‌ , ನಟಿ ರಮ್ಯಾ, ಕಮಲ್‌ ಹಾಸನ್‌, ರಾಜೇಂದ್ರ ಸಿಂಗ್‌ ಬಾಬು, ಮಾಜಿ ಸಚಿವೆ ಉಮಾಶ್ರೀ ಆಗಮಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ಶಾಸಕ ಗಾಲಿ ಜನಾರ್ಧನಾ ರೆಡ್ಡಿ ಆಗಮನ

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌, ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಛತ್ತೀಸ್‌ಗಢ ಮುಖ್ಯಮಂತ್ರಿ ಬೂಪೇಶ್‌ ಬಗೇಲಾ, ಸುಖ್ವಂದರ್‌ ಸಿಂಗ್ ಸುಕು,  ಎಂ.ಕೆ. ಸ್ಟಾಲಿನ್‌ ಮಾಜಿ ಮುಖ್ಯಮಂತ್ರಿ ಮೆಹಬೂಬ, ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಇತರರು ವೇದಿಕೆಯಲ್ಲಿ ಇದ್ದಾರೆ.

ವೇದಿಕೆಗೆ ಸಿದ್ದರಾಮಯ್ಯ ಆಗಮನ

ರಾಜ್ಯ‍ಪಾಲ ತಾವರ್ ಚಂದ್‌, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವೇದಿಕೆಯಲ್ಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆರಂಭ...

ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಪ್ರಮಾಣ ವಚನ ಬೋಧಿಸಿದರು.

ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಅವರು ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಪ್ರಮಾಣ ವಚನ ಬೋಧಿಸಿದರು.

ಡಾ. ಜಿ ಪರಮೇಶ್ವರ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

ಕೆ. ಎಚ್‌. ಮುನಿಯಪ್ಪ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

ಸಂಪುಟ ದರ್ಜೆ ಸಚಿವರಾಗಿ ಕೆ.ಜೆ. ಜಾರ್ಜ್‌ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

ಸಂಪುಟ ದರ್ಜೆ ಸಚಿವರಾಗಿ ಎಂ. ಬಿ. ಪಾಟೀಲ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

ಸಂಪುಟ ದರ್ಜೆ ಸಚಿವರಾಗಿ ಸತೀಶ್‌ ಜಾರಕಿಹೋಳಿ ಅವರು ಬುದ್ಧ, ಬಸವಣ್ಣ, ಅಂಬೇಡ್ಕರ್‌ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

ಸಂಪುಟ ದರ್ಜೆ ಸಚಿವರಾಗಿ ಪ್ರಿಯಾಂಕ್‌ ಖರ್ಗೆ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

ಸಂಪುಟ ದರ್ಜೆ ಸಚಿವರಾಗಿ ರಾಮಲಿಂಗ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕರಿಸಿದರು

ಸಚಿವರಾಗಿ ಜಮೀರ್ ಅಹ್ಮದ್‌ ಖಾನ್‌ ಪ್ರಮಾಣ ವಚನ ಸ್ವೀಕರಿಸಿದರು

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದರು. 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕಚೇರಿಯ ನಾಮಫಲಕವನ್ನು ಬದಲಿಸಲಾಯಿತು. ಮುಖ್ಯಮಂತ್ರಿ ಕಚೇರಿಗೆ ಸಿದ್ದರಾಮಯ್ಯ ಅವರ ಹೆಸರಿನ ಫಲಕವನ್ನು ಅಳವಡಿಸಲಾಗಿದೆ

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಸದಸ್ಯರ ಜತೆ ವಿಧಾನಸೌಧಕ್ಕೆ ಬಂದಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.