ಕಾಂಗ್ರೆಸ್
ಬೆಂಗಳೂರು: ‘ಗ್ರಾಮೀಣ ಭಾಗದ ಹೆಣ್ಣುಮಕ್ಕಳನ್ನು ಅವಹೇಳನ ಮಾಡಿರುವ ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಮತ್ತು ಚುನಾವಣಾ ಪ್ರಚಾರ ಸಮಾವೇಶದಲ್ಲಿ ಧರ್ಮ, ರಾಮಮಂದಿರ ವಿಚಾರವನ್ನು ಪ್ರಸ್ತಾಪಿಸಿದ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.
ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಬಳಿಕ ಮಾತನಾಡಿದ ಕಾಂಗ್ರೆಸ್‌ನ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ‘ಕುಮಾರಸ್ವಾಮಿ ಮಹಿಳೆಯರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಕ್ಷಮೆ ಯಾಚಿಸುವ ಮೂಲಕ ಅವರು ತಮ್ಮ ತಪ್ಪು ಒಪ್ಪಿಕೊಂಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ದೂರು ನೀಡಲಾಗಿದೆ’ ಎಂದರು.
‘ಮೈಸೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಧರ್ಮ, ರಾಮಮಂದಿರ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿ, ದೇಶ ಒಡೆಯುವ ದುರುದ್ದೇಶದಿಂದ ತುಕ್ಡೆ ಗ್ಯಾಂಗ್‌ನೊಂದಿಗೆ ಕಾಂಗ್ರೆಸ್ ಅಲೆದಾಡುತ್ತಿದೆ ಎಂದಿದ್ದಾರೆ. ಆ ಮೂಲಕ, ಕೋಮು ಭಾವನೆ ಪ್ರಚೋದಿಸಿದ್ದಾರೆ. ಮೋದಿ ವಿರುದ್ಧವೂ ಆಯೋಗಕ್ಕೆ ದೂರು ನೀಡಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.