ADVERTISEMENT

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ರಘುವೀರ್

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2024, 13:55 IST
Last Updated 2 ಏಪ್ರಿಲ್ 2024, 13:55 IST
ರಘುವೀರ್ ಎಸ್. ಗೌಡ
ರಘುವೀರ್ ಎಸ್. ಗೌಡ   

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದ ರಘುವೀರ್ ಎಸ್. ಗೌಡ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿಯೂ ರಘುವೀರ್‌ ಗೌಡ ಕಾರ್ಯನಿರ್ವಹಿಸಿದ್ದರು. ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಕಾರ್ಯವೈಖರಿಯನ್ನು ಪರಿಗಣಿಸಿ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಿಸುವಂತೆ ರಾಜ್ಯ ನಾಯಕರು ಎಐಸಿಸಿಗೆ ಶಿಫಾರಸು ಮಾಡಿದ್ದರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT