ADVERTISEMENT

ಸಕ್ರಿಯ ರಾಜಕಾರಣಕ್ಕೆ ವಿದಾಯ: ವಿ.ಆರ್.ಸುದರ್ಶನ್

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2023, 6:52 IST
Last Updated 15 ಏಪ್ರಿಲ್ 2023, 6:52 IST
ವಿ.ಆರ್.ಸುದರ್ಶನ್
ವಿ.ಆರ್.ಸುದರ್ಶನ್   

ಕೋಲಾರ: ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ.

ಈ ಕುರಿತು ಶನಿವಾರ ಬೆಳಿಗ್ಗೆ 'ಪ್ರಜಾವಾಣಿ' ಜೊತೆ ದೂರವಾಣಿ ಮೂಲಕ ಮಾತನಾಡಿ, 'ಕಾಂಗ್ರೆಸ್ ಪಕ್ಷಕ್ಕೆ ನನ್ನ ಧನ್ಯವಾದಗಳು ಹಾಗೂ ಆ ಪಕ್ಷಕ್ಕೆ ಒಳ್ಳೆಯದಾಗಲಿ‌. ದೀರ್ಘ ಆಲೋಚನೆಯ ಬಳಿಕ ಈ ನಿರ್ಧಾರ ಕೈಗೊಂಡಿದ್ದೇನೆ' ಎಂದರು.

'ಜನಪರ, ಸಂವಿಧಾನ ಪರ, ಅಭಿವೃದ್ಧಿ ಪರ ಹೋರಾಟಗಳಲ್ಲಿ ಪಾಲ್ಗೊಳ್ಳುತ್ತೇನೆ. ಆದರೆ, ರಾಜಕಾರಣದಲ್ಲಿ ಇರುವುದಿಲ್ಲ. ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ' ಎಂದು ಹೇಳಿದರು‌.

ADVERTISEMENT

'ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ಮೇಲೆ ಏ.25ರಂದು ಪತ್ರಿಕಾಗೋಷ್ಠಿ ನಡೆಸಿ ಎಲ್ಲಾ ವಿಚಾರ ಹಂಚಿಕೊಳ್ಳುತ್ತೇನೆ' ಎಂದರು.

ಸುದರ್ಶನ್ ಕೂಡ ಕೋಲಾರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

'ಸಿದ್ದರಾಮಯ್ಯ ಸ್ಪರ್ಧಿಸಿದರೆ ಅವರಿಗೆ ಬೆಂಬಲ ನೀಡಿ ಪ್ರಚಾರ ನಡೆಸುತ್ತೇನೆ' ಎಂಬುವುದಾಗಿ ಹೇಳುತ್ತಿದ್ದರು.

ಒಂದೆರಡು ದಿನಗಳಲ್ಲಿ ಟಿಕೆಟ್ ಘೋಷಣೆಯಾಗುವ ನಿರೀಕ್ಷೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.