
ಪ್ರಜಾವಾಣಿ ವಾರ್ತೆಕೋಲಾರ: ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಶ್ರೀನಿವಾಸಪುರ ಪಟ್ಟಣದಲ್ಲಿ ಮುಸ್ಲಿಂ ಮುಖಂಡರ ಎದುರು ಬಿಕ್ಕಿ ಬಿಕ್ಕಿ ಅಳುತ್ತಾ ದುಃಖ ತೋಡಿಕೊಳ್ಳುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ವಿಧಾನಸಭೆಯ ಮಾಜಿ ಸಭಾಧ್ಯಕ್ಷರೂ ಆಗಿರುವ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಪ್ರಮಾಣಪತ್ರದಲ್ಲಿ ಒಟ್ಟು ₹ 4.51 ಕೋಟಿ ಆಸ್ತಿ ಉಲ್ಲೇಖಿಸಿದ್ದಾರೆ. ರಾಯಲ್ಪಾಡು ಹೋಬಳಿಯಲ್ಲಿ 57.25 ಎಕರೆ ಕೃಷಿ ಭೂಮಿ ಇರುವುದನ್ನು ತೋರಿಸಿದ್ದಾರೆ. ಈಚೆಗೆ ಅವರ ಪತ್ನಿ ನಿಧನರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.