‘ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಮಂಜೂರಾಗಿದ್ದ ಆಕ್ಸಿಜನ್ ಸಿಲಿಂಡರ್‌ಗಳನ್ನು ಹುಬ್ಬಳ್ಳಿ– ಧಾರವಾಡ ತೆಗೆದುಕೊಂಡು ಹೋಗಿದ್ದ ಜಗದೀಶ ಶೆಟ್ಟರ್ ಅವರೇ, ಬೆಳಗಾವಿಗೆ ನಿಮ್ಮ ಕೊಡುಗೆ ಏನು? ಜಿಲ್ಲೆಯ ಜನಜರನ್ನು ಬಕರಾ ಮಾಡಲು ಹೊರಟಿದ್ದೀರಾ?’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕಿಡಿ ಕಾರಿದರು. ಬೆಳಗಾವಿ ಜಿಲ್ಲೆ ಗೋಕಾಕ್‌ನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಈಗ ಬಂದು ಬೆಳಗಾವಿ ನನ್ನ ಕರ್ಮಭೂಮಿ ಎಂದು ಹೇಳಿಕೊಳ್ಳುತ್ತಿದ್ದೀರಿ. ಇದನ್ನು ನಂಬಲು ನಾವೇನು ಹುಚ್ಚರೇ?’ ಎಂದೂ ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.