ಶಿವಮೊಗ್ಗ: ಬಿಜೆಪಿಯಿಂದ ತಮ್ಮನ್ನು ಉಚ್ಚಾಟಿಸಿರುವುದಕ್ಕೆ ಹೆದರುವುದಿಲ್ಲ. ಆದರೆ ಉಚ್ಚಾಟನೆಯ ಆದೇಶ ನನಗೆ ಇನ್ನೂ ತಲುಪಿಲ್ಲ. ಮಾಧ್ಯಮಗಳಿಂದ ಗೊತ್ತಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಚುನಾವಣೆಗೆ ಸ್ಪರ್ಧಿಸುವುದು ಶತಃಸಿದ್ಧ. ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೆನು. ಅದರಂತೆ ನಾಮಪತ್ರ ಹಿಂತೆಗೆದುಕೊಳ್ಳದೇ ಕಣದಲ್ಲಿಯೇ ಉಳಿದಿದ್ದೇನೆ. ನಾಳೆಯಿಂದ ಇನ್ನಷ್ಟು ಬಿರುಸಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳುವೆ ಎಂದು ಈಶ್ವರಪ್ಪ ಸೋಮವಾರ ರಾತ್ರಿ ಇಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.