ADVERTISEMENT

ಶೆಟ್ಟರ್‌ಗೆ ಟಿಕೆಟ್ ಸಾಧ್ಯತೆ, ಬಿಜೆಪಿ 2ನೇ ಪಟ್ಟಿ ಇಂದು ಬಿಡುಗಡೆ: ಯಡಿಯೂರಪ್ಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಏಪ್ರಿಲ್ 2023, 10:35 IST
Last Updated 12 ಏಪ್ರಿಲ್ 2023, 10:35 IST
ಬಿ.ಎಸ್‌.ಯಡಿಯೂರಪ್ಪ ಮತ್ತು ಜಗದೀಶ ಶೆಟ್ಟರ್‌
ಬಿ.ಎಸ್‌.ಯಡಿಯೂರಪ್ಪ ಮತ್ತು ಜಗದೀಶ ಶೆಟ್ಟರ್‌   

ಬೆಂಗಳೂರು: ಪಕ್ಷದ ಹಿರಿಯ ನಾಯಕ ಜಗದೀಶ ಶೆಟ್ಟರ್‌ ಅವರಿಗೆ ಟಿಕೆಟ್‌ ಸಿಗುವುದು ಶೇ 99ರಷ್ಟು ಖಚಿತವಾಗಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ಮಂಗಳವಾರ ಪ್ರಕಟಿಸಿದೆ. ಉಳಿದ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ರಾತ್ರಿ ಬಿಡುಗಡೆ ಮಾಡುವ ಸಾಧ್ಯತೆ ಇದೆ’ ಎಂದು ತಿಳಿಸಿದ್ದಾರೆ.

ಈ ಬಾರಿ 125 – 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಿಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಹಿರಿಯ ಶಾಸಕರು ಪ್ರತಿನಿಧಿಸುವ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಮೊದಲ ಪಟ್ಟಿಯಲ್ಲಿ ಘೋಷಿಸಿಲ್ಲ. ಎಂಟು ಶಾಸಕರಿಗೆ ಟಿಕೆಟ್ ನೀಡದೇ, ಹೊಸಮುಖಗಳಿಗೆ ಮಣೆ ಹಾಕಲಾಗಿದೆ. ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯವೂ ಭುಗಿಲೆದ್ದಿದೆ.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಂದಾಯ ಸಚಿವ ಆರ್. ಅಶೋಕ ಅವರನ್ನು ಕಣಕ್ಕೆ ಇಳಿಸುವ ಮೂಲಕ ಕಾಂಗ್ರೆಸ್‌ನ ‘ಜೋಡಿ ಎತ್ತು’ಗಳನ್ನು ಕಟ್ಟಿ ಹಾಕುವ ರಣತಂತ್ರ ಹೆಣೆದಿದೆ.

ಅಶೋಕ ಅವರು ಪದ್ಮನಾಭನಗರ ಹಾಗೂ ಸೋಮಣ್ಣ ಅವರು ಚಾಮರಾಜನಗರದಿಂದಲೂ ಸ್ಪರ್ಧೆ ಮಾಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.