ಶಿರಸಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಶಿರಸಿಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ಬಂದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಾಸಿಗೂ ಅಧಿಕ ಕಾಲ ಕಾಗೇರಿ ಹಾಗೂ ಪಕ್ಷದ ವರಿಷ್ಠರ ಜೊತೆ ಮಾತುಕತೆ ನಡೆಸಿದ್ದಾರೆ.
ಜಗದೀಶ್ ಶೆಟ್ಟರ್ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಚೇರಿಯ ಒಳ ಕೊಠಡಿಯಲ್ಲಿ ಕುಳಿತು ಮಾತುಕತೆ ನಡೆಸಿದ್ದಾರೆ.
ಶೆಟ್ಟರ್ ಮನವೊಲಿಸಲು ಕೊನೆಯ ಪ್ರಯತ್ನ ಎಂಬಂತೆ ಪಕ್ಷದ ವರಿಷ್ಠರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ.
ಮಾತುಕತೆಯ ವೇಳೆ ಕಲಘಟಕಿ ಕ್ಷೇತ್ರದ ಮಾಜಿ ಶಾಸಕ ಚಿಕ್ಕನಗೌಡರ್ ಜೊತೆಗಿದ್ದಾರೆ. 11.15 ಗಂಟೆಗೆ ರಾಜೀನಾಮೆ ನೀಡಲು ಕಾಗೇರಿ ಕಚೇರಿಗೆ ಬಂದ ಶಾಸಕರು 12.40 ಗಂಟೆಯಾದರೂ ಹೊರಬರದೆ ಮಾತುಕತೆ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.