ADVERTISEMENT

Karnataka Election 2023: ಬಿಜೆಪಿಯತ್ತ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2023, 9:20 IST
Last Updated 12 ಏಪ್ರಿಲ್ 2023, 9:20 IST
ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಭೇಟಿ ಮಾಡಿ ಚರ್ಚೆ ನಡೆಸಿದರು.
ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಭೇಟಿ ಮಾಡಿ ಚರ್ಚೆ ನಡೆಸಿದರು.   

ಸಾಗರ (ಶಿವಮೊಗ್ಗ ಜಿಲ್ಲೆ): ಅಚ್ಚರಿಯ ಬೆಳವಣಿಗೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ‌.ರಾಜನಂದಿನಿ ಬಿಜೆಪಿ ಸೇರಲು ಮುಂದಾಗಿದ್ದಾರೆ.

ಕೆಪಿಸಿಸಿ ಕಾರ್ಯದರ್ಶಿ ಆಗಿರುವ ರಾಜನಂದಿನಿ ಸಾಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಪಕ್ಷ ಮಾಜಿ ಶಾಸಕ ಗೋಪಾಕೃಷ್ಣ ಬೇಳೂರು ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿತ್ತು. ಹೀಗಾಗಿ ರಾಜನಂದಿನಿ ಅವರು ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು.

ಆದರೆ ಕಾಗೋಡು ತಿಮ್ಮಪ್ಪ ಮಾತ್ರ ತಮ್ಮ ಸೋದರ ಅಳಿಯ ಬೇಳೂರು ಗೋಪಾಲಕೃಷ್ಣ ಪರ ಅಚಲವಾಗಿ ನಿಂತಿದ್ದಾರೆ. ಈ ಹೊತ್ತಿಗೆ ಬಿಜೆಪಿ ಅವರ ಪುತ್ರಿಗೆ ಗಾಳ ಹಾಕಿ ಕಾಂಗ್ರೆಸ್ ಗೆ ಶಾಕ್ ನೀಡಿದೆ. ರಾಜನಂದಿನಿ ಅವರೊಂದಿಗೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೊನಗೋಡು ರತ್ನಾಕರ್ ಕೂಡ ಬಿಜೆಪಿಯತ್ತ ಮುಖ ಮಾಡಿದ್ದಾರೆ.

ADVERTISEMENT

ಬುಧವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ರಾಜನಂದಿನಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಇದು ಅವರು ಬಿಜೆಪಿ ಸೇರ್ಪಡೆ ವಿಷಯವನ್ನು ಬಹುತೇಕ ಖಚಿತಪಡಿಸಿದೆ.

ಈ ವೇಳೆ ರಾಜನಂದಿನಿ ಅವರೊಂದಿಗೆ ಸಾಗರ ಶಾಸಕ ಹರತಾಳು ಹಾಲಪ್ಪ ಕೂಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.