ADVERTISEMENT

ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದ ಸ್ಥಿತಿ ಇದೆ: ಬಸವರಾಜ ಹೊರಟ್ಟಿ ಬೇಸರ

​ಪ್ರಜಾವಾಣಿ ವಾರ್ತೆ
Published 10 ಮೇ 2023, 5:04 IST
Last Updated 10 ಮೇ 2023, 5:04 IST
   

ಹುಬ್ಬಳ್ಳಿ: ಸದ್ಯ ರಾಜಕೀಯ ವ್ಯವಸ್ಥೆ ನೋಡಿದರೆ ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದ ಪರಿಸ್ಥಿತಿ ಎದುರಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.

ನಗರದ ಲ್ಯಾಮಿಂಗ್ಟನ್ ಶಾಲೆಯ ಮತಗಟ್ಟೆಯಲ್ಲಿ ಬುಧವಾರ ಕುಟುಂಬ ಸಮೇತ ಭೇಟಿ, ಮತ ಚಲಾಯಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು‌.

ಅಭ್ಯರ್ಥಿಗಳು ಮತದಾರರಿಗೆ ಆಮಿಷ ಒಡ್ಡುತ್ತಿರುವುದು ವಿಷಾದನೀಯ. ಒಂದೊಂದು ಮತಕ್ಕೆ ಐದು ಸಾವಿರ ಕೊಟ್ಟಿದ್ದಾರೆ ಎಂಬುದು ಗೊತ್ತಾಗಿದೆ. ಕೆಲವು ಮತದಾರರು ಆಮಿಷಕ್ಕೆ ಒಳಗಾಗುತ್ತಿದ್ದು, ಪ್ರಜಾಪ್ರಭುತ್ವದಲ್ಲಿ ಈ ರೀತಿ ಆಗಬಾರದು‌ ಎಂದರು.

ADVERTISEMENT

ಆಸೆ ಆಕಾಂಕ್ಷಿಗಳಿಗೆ ಬಲಿಯಾಗದೆ ಜನರು ಅಭಿವೃದ್ಧಿ ನೋಡಿ ಮತದಾನ ಮಾಡಬೇಕು. ಇವತ್ತಿನ ರಾಜಕಾರಣ ಕುಲಗೆಟ್ಟ ಹೋಗಿದ್ದು, ಅಭಿವೃದ್ಧಿ ಆಧಾರಿತ ರಾಜಕಾರಣ ಮೂಲೆ ಸೇರಿದೆ. ಕೇವಲ ಆರೋಪ, ಪ್ರತ್ಯಾರೋಪಗಳಿಗೆ ಪ್ರಚಾರ ಸೀಮಿತ ಆಗಿತ್ತು. ಇಂತಹ ವ್ಯವಸ್ಥೆ ಬದಲಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.