ADVERTISEMENT

ಗೋಹತ್ಯೆ ನಿಷೇಧ ರದ್ದತಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರಿಸಲಿ –ಈಶ್ವರಪ್ಪ ಸವಾಲು

ಪ್ರಜಾವಾಣಿ ವಿಶೇಷ
Published 3 ಮೇ 2023, 12:29 IST
Last Updated 3 ಮೇ 2023, 12:29 IST

‘ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾಯ್ದೆ ರದ್ದುಪಡಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ತಾಕತ್ತಿದ್ದರೆ ಕಾಂಗ್ರೆಸ್ ಪಕ್ಷ ಈ ವಿಷಯವನ್ನು ತನ್ನ ಪ್ರಣಾಳಿಕೆಯಲ್ಲಿ ಸೇರಿಸಿ ಮತ ಕೇಳಲಿ’ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದರು.

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಹ್ಯಾರಡ ಗ್ರಾಮದಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿ ಕೃಷ್ಣನಾಯ್ಕ ಪರ ಮತಯಾಚಿಸಿ ಮಾತನಾಡಿದ ಅವರು, ‘ಗೋವುಗಳ ಬಗ್ಗೆ ಪೂಜ್ಯನೀಯ ಭಾವನೆ ಇರುವ ಕಾರಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದ್ದೇವೆ. ಆದರೆ ಕಾಂಗ್ರೆಸ್ಸಿಗರು ಗೋಹತ್ಯೆಯ ಪರವಾಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆ ರದ್ದುಪಡಿಸುವುದಾಗಿ ಬಾಯಿ ಬಿಟ್ಟು ಹೇಳುವವರು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿ ಮತ ಕೇಳಿದ್ದರೆ, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರು ಚುನಾವಣೆಯಲ್ಲಿ ಗೆಲ್ಲಲು ಆಗುತ್ತಿರಲಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT