ADVERTISEMENT

ಪ್ರಜಾತಂತ್ರ ಹಬ್ಬದಲ್ಲಿ ಪಾಲ್ಗೊಳ್ಳಿ: ಮಾದಾರ ಚನ್ನಯ್ಯ ಸ್ವಾಮೀಜಿ ಮನವಿ

​ಪ್ರಜಾವಾಣಿ ವಾರ್ತೆ
Published 10 ಮೇ 2023, 4:40 IST
Last Updated 10 ಮೇ 2023, 4:40 IST
ಮಾದಾರ ಚನ್ನಯ್ಯ ಸ್ವಾಮೀಜಿ
ಮಾದಾರ ಚನ್ನಯ್ಯ ಸ್ವಾಮೀಜಿ   

ಚಿತ್ರದುರ್ಗ: ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಠದ ಕುರುಬರ ಹಟ್ಟಿಯ ಮತಗಟ್ಟೆಯಲ್ಲಿ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಬುಧವಾರ ಬೆಳಿಗ್ಗೆ ಮತದಾನ ಮಾಡಿದರು.

'ಇಂದು ಸಂವಿಧಾನ ಬದ್ಧ ಪ್ರಜಾತಂತ್ರದ ಹಬ್ಬ ಆಚರಿಸುತ್ತಿದ್ದೇವೆ. ಪ್ರತಿಯೊಬ್ಬರೂ ಮನೆಯಿಂದ ಹೊರಬಂದು ಮತ ಚಲಾಯಿಸಬೇಕು. ಈ ಮೂಲಕ ತಮ್ಮ ಹಕ್ಕನ್ನು ಪ್ರತಿಪಾದಿಸಬೇಕು' ಎಂದು ಸ್ವಾಮೀಜಿ ಮನವಿ ಮಾಡಿದರು.

'ತಮ್ಮ‌ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಸೂಕ್ತ ಎನಿಸುವ ಅಭ್ಯರ್ಥಿಗೆ ಮತ ಹಾಕಿ ಗೆಲ್ಲಿಸುವುದು ಕರ್ತವ್ಯ. ಯಾರೂ ಸಹ ಶಾಂತಿ ಕದಡುವ ಕೆಲಸ ಮಾಡಬಾರದು. ಶಾಂತಿಯುತ ಮತದಾನಕ್ಕೆ ಎಲ್ಲರೂ ಒತ್ತು ನೀಡಬೇಕು' ಎಂದು ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.